Download Our App

Follow us

Home » ರಾಜ್ಯ » ಗುಜರಾತ್​​, ದೆಹಲಿಯಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ – ಬೆಂಗಳೂರಲ್ಲಿ ಮುನ್ನೆಚ್ಚರಿಕೆ ವಹಿಸಲು BBMPಗೆ ಡಿಸಿಎಂ ಡಿಕೆಶಿ ಸೂಚನೆ..!

ಗುಜರಾತ್​​, ದೆಹಲಿಯಲ್ಲಿ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ – ಬೆಂಗಳೂರಲ್ಲಿ ಮುನ್ನೆಚ್ಚರಿಕೆ ವಹಿಸಲು BBMPಗೆ ಡಿಸಿಎಂ ಡಿಕೆಶಿ ಸೂಚನೆ..!

ಬೆಂಗಳೂರು : ರಾಜ್​ಕೋಟ್​ನ ಟಿಆರ್​ಪಿ ಗೇಮಿಂಗ್ ಝೋನ್​ನಲ್ಲಿ ನಿನ್ನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಾರೆ. ಇನ್ನು, ದೆಹಲಿಯಲ್ಲಿ ಮಕ್ಕಳ  ಆಸ್ಪತ್ರೆಗೆ ಬೆಂಕಿ ಬಿದ್ದು 7 ಶಿಶುಗಳು ಸಾವನ್ನಪ್ಪಿದ್ದವು. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚೆತ್ತಿದ್ದು, ಬೆಂಗಳೂರಿನ ಮಾಲ್ ಮತ್ತು ಗೇಮಿಂಗ್ ಝೋನ್​​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿಕೆ ಶಿವಕುಮಾರ್​ ಖಡಕ್​ ‌ಸೂಚನೆ ನೀಡಿದ್ದಾರೆ.

ಈ ಕುರಿತಾಗಿ ಪತ್ರ ಬರೆದಿರುವ ಡಿಕೆ ಶಿವಕುಮಾರ್​, ಬೆಂಗಳೂರಿನಾದ್ಯಂತ ಶಾಪಿಂಗ್ ಮಾಲ್‌ಗಳು, ಗೇಮಿಂಗ್ ಮತ್ತು ಸಾಹಸ ವಲಯಗಳಂತಹ ಹೆಚ್ಚಾಗಿ ಜನದಟ್ಟಣೆ ಇರುವ ಮನರಂಜನಾ ಸ್ಥಳಗಳಲ್ಲಿ ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಅನುಸರಣೆ ಅತ್ಯಂತ ಮಹತ್ವದ್ದಾಗಿದೆ.

ಅಗ್ನಿ ಅವಘಡಗಳನ್ನು ತಪ್ಪಿಸುವುದಕ್ಕಾಗಿ ನಿಯಮಿತ ತಪಾಸಣೆಗಳನ್ನು ಕಡ್ಡಾಯವಾಗಿ ಮಾಡುವುದರೊಂದಿಗೆ, ನಗರದಾದ್ಯಂತ ಮನರಂಜನಾ ಸ್ಥಳಗಳಲ್ಲಿ ಸುರಕ್ಷಿತ ಕ್ರಮಗಳನ್ನು ತ್ವರಿತವಾಗಿ ಅಳವಡಿಸಲು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಕಲಬುರಗಿ : ಮಳೆ ಬಂತೆಂದು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಇಬ್ಬರು ಸಾ*ವು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here