ಚಿತ್ರದುರ್ಗ : PDO ನಿರ್ಲಕ್ಷ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ತಮ್ಮ ಕರ್ತವ್ಯಕ್ಕೆ ರಿಸೈನ್ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಕರಿಯಾಲ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದು, ಅಧ್ಯಕ್ಷ – ಉಪಾಧ್ಯಕ್ಷ ಸೇರಿ 11 ಮಂದಿ ಸದಸ್ಯರು ರಾಜೀನಾಮೆ ನೀಡಿದ್ದಾರೆ.
PDO ಚಂದ್ರಕಲಾ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ, ಪಂಚಾಯಿತಿ ಹೇಳಿದ ಯಾವ ಕೆಲಸನೂ ಮಾಡಲ್ಲ. ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಹೆಚ್ಚಾಗಿದೆ. ಈ ಕುರಿತು ಸಮಸ್ಯೆ ಬಗೆಹರಿಸಲು ಫೋನ್ ಮಾಡಿದರೆ ಫೋನ್ ಪಿಕ್ ಮಾಡುತ್ತಿಲ್ಲ ಎಂದು PDO ಚಂದ್ರಕಲಾ ವಿರುದ್ಧ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷ, ಸದಸ್ಯರು ಆರೋಪ ಮಾಡಿದ್ದಾರೆ.
ಇದನ್ನೂ ಓದಿ : ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ..!
Post Views: 468