ಬೆಂಗಳೂರು : ಸಿಲಿಕಾನ್ ಸಿಟಿ ಸೇರಿ ರಾಜ್ಯಾದ್ಯಂತ ಜನರುಸಂಭ್ರಮದಿಂದ ಸಡಗರದಿಂದ ಹೊಸ ವರ್ಷವನ್ನು ಸ್ವಾಗತ ಮಾಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಹೊಸ ವರ್ಷ ಝಗಮಗಿಸಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ , ಚರ್ಚ್ ಸ್ಟ್ರೀಟ್ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ, ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸುವ ಮೂಲಕ ಯುವ ಜನರು ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.
ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‍ನ ಪಬ್‍ಗಳು, ಹೋಟೆಲ್‍ಗಳು ತುಂಬಿ ತುಳುಕಿದವು. ಇನ್ನು ರಸ್ತೆಗಳಲ್ಲಿ ಯುವಕ-ಯುವತಿಯರು ರಾತ್ರಿಯಿಡೀ ಕುಣಿದು ಕುಪ್ಪಳಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು. ಜನಸಂದಣಿ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ ಮಾಡಲಾಗಿತ್ತು. ಬ್ರಿಗೇಡ್ ರಸ್ತೆಯಲ್ಲಿ ತಳ್ಳಾಟ ನೂಕಾಟ ಹೆಚ್ಚಾಗಿದ್ದರಿಂದ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಮೈಸೂರು, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ ಸೇರಿ ರಾಜ್ಯಾದ್ಯಂತ ಜನರು ಸಂಭ್ರಮದಿಂದ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಸ್ವಾಗತ ಮಾಡಿದ್ದಾರೆ. ಎಲ್ಲೆಲ್ಲೂ ಸಾರ್ವಜನಿಕರು, ಯುವ ಜನತೆ ಪರಸ್ಪರ ಶುಭಾಶಯ ಕೋರುತ್ತಾ ನ್ಯೂ ಇಯರ್ ಎಂಜಾಯ್ ಮಾಡುತ್ತಾ ಭರ್ಜರಿಯಾಗಿ ಸ್ವಾಗತಿಸಿದ್ದಾರೆ.
ಇದನ್ನೂ ಓದಿ : ಡಿವೋರ್ಸ್ ಕೊಟ್ರೂ ಕಡಿಮೆ ಆಗಿಲ್ಲ ಮೊಹಬ್ಬತ್.. ಪತ್ನಿ-ಲವ್ವರ್ ಜೊತೆ ಹೃತಿಕ್ ರೋಷನ್ ನ್ಯೂ ಇಯರ್ ಪಾರ್ಟಿ!