Download Our App

Follow us

Home » ರಾಜ್ಯ » 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

ಬೆಂಗಳೂರು : 5, 8 ಮತ್ತು 9ನೇ ತರಗತಿಗಳ ಪರೀಕ್ಷೆ ಸರ್ಕಾರ ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆಯೇ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಯಲಿದೆ.

2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಪರೀಕ್ಷೆ ನಡೆಸುವ ಸಂಬಂಧ ಹೈಕೋರ್ಟ್​ ಕೂಡಾ ಸೂಚನೆ ನೀಡಿದೆ. ಮೌಲ್ಯಾಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಿದೆ. ಅದರಂತೆ ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಮೌಲ್ಯಾಂಕನ ಕಾರ್ಯ ಯಥಾವತ್ತಾಗಿ ಮುಂದುವರೆಯುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಮೌಲ್ಯಾಂಕನ ಪರೀಕ್ಷೆ ನಡೆಸುವ ಸಂಬಂಧ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಸರಕಾರದ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು ಮಾಡಲಾಗಿತ್ತು. ಆದರೆ ತೀರ್ಪಿನ ವಿರುದ್ಧ ಸರಕಾರ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಿದೆ. ಹಾಗಾಗಿ ನಿಗದಿತ ವೇಳಾಪಟ್ಟಿಯಂತೆಯೇ 5, 8 ಮತ್ತು 9ನೇ ತರಗತಿಗಳ ಪರೀಕ್ಷೆ ನಡೆಯಲಿದೆ

ಇನ್ನು ಪಬ್ಲಿಕ್​ ಪರೀಕ್ಷೆ ಸಂಬಂಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿರುವುದಕ್ಕೆ ರುಪ್ಸಾ ಅಧ್ಯಕ್ಷ ಲೋಕೇಶ್​ ತಾಳಿಕಟ್ಟೆ ಖಂಡಿಸಿದ್ದಾರೆ.

ಇದನ್ನೂ ಓದಿ : ಶರಣ್ ಅಭಿನಯದ ಬಹುನಿರೀಕ್ಷಿತ ಸಿನಿಮಾ “ಅವತಾರ ಪುರುಷ 2” ಮಾರ್ಚ್ 22ರಂದು ತೆರೆಗೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಖಾಕಿ ಕೋಟಿ ದಂಧೆ : ಮೆಜೆಸ್ಟಿಕ್​ನಲ್ಲಿ ಖಾಸಗಿ ಬಸ್​ಗೆ ಬೆಂಕಿ ಬಿದ್ದಿರೋ ಹಿಂದಿದೆ ಮಹಾ ಭ್ರಷ್ಟಾಚಾರ – ಪೊಲೀಸರ ಲಂಚದ ವಿಡಿಯೋ ಲೀಕ್..!

ಬೆಂಗಳೂರು : ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್​ನಲ್ಲಿ ದಿನ ನಿತ್ಯ ಸಾವಿರಾರು ಜನರು ಒಡಾಡ್ತಾರೆ. ಕಾಲಿಡಲು ಜಾಗವಿಲ್ಲದಷ್ಟು ಬ್ಯುಸಿ ಏರಿಯಾದಲ್ಲಿ ನಿನ್ನೆ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ರೂ

Live Cricket

Add Your Heading Text Here