ಮಂಡ್ಯ : ವರಮಹಾಲಕ್ಷ್ಮಿ ಹಬ್ಬಕ್ಕೆ ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿಯರಿಗೆ ಬಿಗ್ ಗಿಫ್ಟ್ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದಲೇ ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಬಗ್ಗೆ ಮಂಡ್ಯದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಎರಡು ತಿಂಗಳಿನಿಂದ ತಾಂತ್ರಿಕ ಕಾರಣಗಳಿಂದಾಗಿ ಮಹಿಳೆಯರ ಖಾತೆಗೆ ಹಣ ಬಂದಿರಲಿಲ್ಲ. ಇಂದಿನಿಂದಲೇ ಜೂನ್, ಜುಲೈ ತಿಂಗಳ ಹಣ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ. ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಲಿದೆ. ಎರಡು ಹಂತಗಳಲ್ಲಿ ಇಲಾಖೆ ಹಣ ರಿಲೀಸ್ ಮಾಡಲಿದ್ದು, ಬೆಂಗಳೂರು, ಕೋಲಾರ, ಹಾವೇರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ, ಬೀದರ್, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಚಿತ್ರದುರ್ಗ, ಯಾದಗಿರಿ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಿದೆ. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿ ಮಾಡಲಿದ್ದು, ಎರಡನೇ ಹಂತದಲ್ಲಿ ಉಳಿದ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ‘ಗೌರಿ’ ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್ – ಆ.15ಕ್ಕೆ ಚಿತ್ರ ತೆರೆಗೆ..!