Download Our App

Follow us

Home » ರಾಜಕೀಯ » ವಿಜಯಪುರ, ದೇವನಹಳ್ಳಿಯಲ್ಲಿ ಸಚಿವ ಕೆ.ಹೆಚ್​.ಮುನಿಯಪ್ಪ ನೇತೃತ್ವದಲ್ಲಿ ಬೃಹತ್​ ಗ್ಯಾರಂಟಿ ಸಮಾವೇಶ..!

ವಿಜಯಪುರ, ದೇವನಹಳ್ಳಿಯಲ್ಲಿ ಸಚಿವ ಕೆ.ಹೆಚ್​.ಮುನಿಯಪ್ಪ ನೇತೃತ್ವದಲ್ಲಿ ಬೃಹತ್​ ಗ್ಯಾರಂಟಿ ಸಮಾವೇಶ..!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೃಹತ್​ ಗ್ಯಾರಂಟಿ ಅಭಿಯಾನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್​.ಮುನಿಯಪ್ಪ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ವಿಜಯಪುರ, ದೇವನಹಳ್ಳಿಯಲ್ಲಿ ಬೃಹತ್​ ಕಾರ್ಯಕ್ರಮ ಆಯೋಜನೆಯಾಗಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್​.ಮುನಿಯಪ್ಪ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಜನ ಜಾಗೃತಿ ಸಮಾವೇಶ ನಡೆಯಲಿದೆ. ಮುನಿಯಪ್ಪ ಅನ್ನಭಾಗ್ಯ ಗ್ಯಾರಂಟಿಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದು, ಗ್ರಾಮಾಂತರ ಜಿಲ್ಲೆಯಲ್ಲಿ 5 ಗ್ಯಾರಂಟಿಗಳ ಅನುಷ್ಠಾನದಲ್ಲೂ ದಾಖಲೆಯಿದೆ. ಎಲ್ಲರಿಗೂ ಐದು ಗ್ಯಾರಂಟಿ ತಲುಪಿಸುವಲ್ಲಿ ಸಚಿವ ಮುನಿಯಪ್ಪ ಯಶಸ್ವಿಯಾಗಿದ್ದಾರೆ.

ಕೆ.ಹೆಚ್​.ಮುನಿಯಪ್ಪ ಅತ್ಯಂತ ಯಶಸ್ವಿ ಸಚಿವರಾಗಿ ಗಮನ ಸೆಳೆದಿದ್ದು, ಆಹಾರ ಸಚಿವರಾಗಿಯೂ ಅತ್ಯಂತ ಮೆಚ್ಚುಗೆ ಗಳಿಸಿದ್ದಾರೆ. ವಿಜಯಪುರದ ಅನ್ನಪೂರ್ಣೇಶ್ವರಿ ಕನ್ವೆಷನ್​ ಹಾಲ್​​ನಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ನಂತರ ಮಧ್ಯಾಹ್ನ 1 ಗಂಟೆಗೆ ಬೂದಿಗೆರೆ ಬಸ್ ನಿಲ್ದಾಣ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಗ್ಯಾರಂಟಿಗಳ ಜಾಗೃತಿ ಮೂಡಿಸಲಿದ್ದಾರೆ. ಇವತ್ತು ಇಡೀ ದಿನ ವಿಜಯಪುರ, ದೇವನಹಳ್ಳಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ಇದು ಮಹತ್ವದ ಕಾರ್ಯಕ್ರಮವಾಗಿದೆ.

ಇದನ್ನೂ ಓದಿ : ಶಿರಸಿ : ಶಿವಲಿಂಗದ ಮೇಲೆ ಬಳಪದಿಂದ ಬರೆದು ವಿಕೃತಿ ಮೆರೆದ ಕಿಡಿಗೇಡಿಗಳು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here