ಗುಜರಾತ್ : ಮೊನ್ನೆಯಷ್ಟೇ ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 3ನೇ ತರಗತಿಯ ವಿದ್ಯಾರ್ಥಿನಿ ತೇಜಸ್ವಿನಿ ಎಂಬಾಕೆ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಳು. ಕ್ಲಾಸ್ನಲ್ಲೇ ಕುಸಿದು ಬಿದ್ದಿದ್ದ ವಿದ್ಯಾರ್ಥಿನಿ ತೇಜಸ್ವಿನಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿತ್ತು. ಇದೀಗ ಇಂತಹದ್ದೆ ಮತ್ತೊಂದು ದುರಂತ ಸಂಭವಿಸಿದೆ.
ಹೌದು.. ನಿನ್ನೆ ಅಹಮದಾಬಾದ್‌ನ ಝೆಬಾರ್ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿ ಶಾಲೆಯ ಲಾಬಿಯಲ್ಲಿ ಅಸ್ವಸ್ಥಗೊಂಡು ಬೆಂಚ್ ಮೇಲೆ ಕುಳಿತುಕೊಂಡಿದ್ದಾಕೆ ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ಕುಸಿದು ಬಿಳುತ್ತಿರೋ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿದ್ಯಾರ್ಥಿನಿ ಕುಸಿದು ಬೀಳುವ ಹೊತ್ತಲ್ಲೇ ಹತ್ತಿರದಲ್ಲಿ ನಿಂತುಕೊಂಡಿದ್ದ ಶಿಕ್ಷಕರು ಆಕೆಯ ಸಹಾಯಕ್ಕೆ ಧಾವಿಸಿದ್ದಾರೆ. ಕೂಡಲೇ ಸಿಪಿಆರ್ ನೀಡಲು ಪ್ರಯತ್ನಿಸಿದ್ದಾರೆ. ಬಳಿಕ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವಿದ್ಯಾರ್ಥಿನಿ ಅಷ್ಟೋತ್ತಿಗಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ಮಾಹಿತಿಗಳ ಪ್ರಕಾರ, ಬಾಲಕಿಗೆ ಈ ಹಿಂದೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೆ, ಶುಕ್ರವಾರ ಅಸ್ವಸ್ಥಳಾಗಿದ್ದ ಆಕೆ ಶಾಲೆಯ ಲಾಬಿಯಲ್ಲಿ ಬೆಂಚ್ ಮೇಲೆ ಕುಳಿತು ಏಕಾಏಕಿ ಕುಸಿದು ಬಿದ್ದಿದ್ದಾಳೆ. ಪ್ರಾಥಮಿಕ ತನಿಖೆಯಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನೂ ಮೃತ ವಿದ್ಯಾರ್ಥಿನಿಯ ಪೋಷಕರು ಮುಂಬೈನಲ್ಲಿ ವಾಸಿಸುತ್ತಿದ್ದು, ಆಕೆ ಅಹಮದಾಬಾದ್‌ನಲ್ಲಿ ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು.
ಇದನ್ನೂ ಓದಿ : ಚಹಲ್ ಬಳಿಕ ಕನ್ನಡಿಗ ಮನೀಶ್ ಪಾಂಡೆ ದಾಂಪತ್ಯದಲ್ಲಿ ಬಿರುಕು? – ಇನ್ಸ್ಟಾದಲ್ಲಿ ಅನ್‌ಫಾಲೋ, ಫೋಟೋಸ್ ಡಿಲೀಟ್!