ಕಲಬುರಗಿ : ಅಕ್ರಮವಾಗಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಆರೋಪಿಯ ಮೇಲೆ ಬೆಳ್ಳಂಬೆಳಗ್ಗೆ ಪೋಲಿಸರು ಫೈರಿಂಗ್ ಮಾಡಿರುವ ಘಟನೆ ನಗರದ ಹೊರವಲಯದ ತಾವರಗೇರಾ ಬಳಿ ನಡೆದಿದೆ.
ಸುಪ್ರೀತ್ (32) ಎಂಬ ವ್ಯಕ್ತಿ ಅಕ್ರಮವಾಗಿ ಕಾರಿನಲ್ಲಿ ಡ್ರಗ್ಸ್‌ನ್ನು ಸಪ್ಲೈ ಮಾಡ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಖಾಕಿ ಪಡೆ ದಾಳಿ ಮಾಡಿದ್ದು, ಪೋಲಿಸರು ಕಾರು ನಿಲ್ಲಿಸಿ ತಪಾಸಣೆ ಮಾಡುವಾಗ ಪೋಲಿಸರ ಮೇಲೆ ಆರೋಪಿ ಸುಪ್ರೀತ್ ಚಾಕುವಿನಿಂದ ದಾಳಿ ಮಾಡಿದ್ದಾನೆ.
ಹೆಡ್ ಕಾನ್ಸ್ಟೇಬಲ್ ಗುರುಮೂರ್ತಿಯ ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದು, ಈ ವೇಳೆ ಚೌಕ್ ಪೋಲಿಸ್ ಠಾಣೆಯ ಪಿಐ ರಾಘವೇಂದ್ರ ಅವರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಇನ್ನೂ ಫೈರಿಂಗ್ ಮಾಡಿದ ಪರಿಣಾಮವಾಗಿ ಆರೋಪಿ ಸುಪ್ರೀತ ಗಾಯವಾಗಿದ್ದು, ಜಿಮ್ಸ್ ಆಸ್ಪತ್ರೆಯ ಟ್ರಾಮಾ ಕೆರ್ ಸೆಂಟರ್ಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ : ಶರಣಾದ ನಕ್ಸಲರು ಬಳಸುತ್ತಿದ್ದ AK 56 ಗನ್ ಸೇರಿದಂತೆ 6 ಶಸ್ತ್ರಾಸ್ತ್ರಗಳು ಪತ್ತೆ!
Post Views: 92