ಹಾವೇರಿ : ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿಂದು ಆಯೋಜನೆಗೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನೂ ಭೇಟಿ ಮಾಡಿ ಸಮಸ್ಯೆಗಳನ್ನ ಆಲಿಸಿದ್ದಾರೆ.
ಪೊಲೀಸರಿಂದ ತನಿಖೆಯ ಬೆಳವಣಿಗೆ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಸಂತ್ರಸ್ತೆಯ ಸಂಬಂಧಿಕರನ್ನು ಭೇಟಿಯಾಗಿ ಅವರ ಮನವಿಯನ್ನು ಸ್ವೀಕರಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನೂ ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ, ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡೋದಿಲ್ಲ.
ಯಾವುದೇ ಧರ್ಮಕ್ಕೆ ಸೇರಿದವರಾಗಲಿ ಜಾತಿಗೆ ಸೇರಿದವರಾಗಿದ್ದರೂ ಕ್ರಮ ಗ್ಯಾರಂಟಿ. ಈ ಕೇಸ್‌ನಲ್ಲಿ ಯಾರೇ ಕಾನೂನು ಕೈಗೆ ತೆಗೆದುಕೊಂಡಿದ್ದರೂ ಶಿಕ್ಷೆ ಕೊಡಿಸ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಸಂತ್ರಸ್ಥೆ ಕುಟುಂಬಸ್ಥರು ಈಗಷ್ಟೇ ಮನವಿ ಕೊಟ್ಟಿದ್ದಾರೆ. ಈಗ ತನಿಖೆ ಮಾಡಿದವರೂ ಪೊಲೀಸರೇ ಎಸ್‌ಐಟಿಯವರೂ ಪೊಲೀಸರು, ಪ್ರಾಥಮಿಕ ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುತ್ತದೆ.
ಯಾರನ್ನು ಸುಮ್ನೆ ಬಿಡಲ್ಲ.. ಕ್ರಮ ಕೈಗೊಳ್ಳುತ್ತೇವೆ. ಯಾವುದನ್ನೂ ಮುಚ್ಚಿ ಹಾಕೋ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ನಮ್ಮ ಶಾಸಕ ಶಿವಣ್ಣ ಅವರೊಂದಿಗೂ ಚರ್ಚಿಸಿದ್ದೇನೆ, ಮುಂದಿನ ಕ್ರಮ ತಗೊಳ್ತೀವಿ ಎಂದು ಹೇಳಿದರು.
ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಸಾಗಿದೆ 45 ಚಿತ್ರದ ಚಿತ್ರೀಕರಣ..!