Download Our App

Follow us

Home » ಸಿನಿಮಾ » ‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರದ ಟೈಟಲ್ & ಫಸ್ಟ್ ಝಲಕ್ ರಿಲೀಸ್..!

‘ಹನುಮಾನ್’ ಹೀರೋ ತೇಜ್ ಸಜ್ಜಾ ನಟನೆಯ ಪ್ಯಾನ್ ಇಂಡಿಯಾ ಚಿತ್ರದ ಟೈಟಲ್ & ಫಸ್ಟ್ ಝಲಕ್ ರಿಲೀಸ್..!

ಹನುಮಾನ್ ಸಿನಿಮಾ ಮೂಲಕ ಸೂಪರ್ ಸಕ್ಸಸ್ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ ಹೊಸ ಸಿನಿಮಾ ಅನೌನ್ಸ್ ಆಗಿದೆ. ಕಾರ್ತಿಕೇಯ, ಕಾರ್ತಿಕೇಯ-2 , ಧಮಾಕ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ ತೇಜ್ ಸಜ್ಜಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಇಂದು ಅನಾವರಣಗೊಂಡಿದೆ.

ಹನುಮಾನ್​ನಲ್ಲಿ ಸೂಪರ್ ಹೀರೋ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಾಫ್ಟ್ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ಮಿರಾಯ್ ಎಂಬ ಟೈಟಲ್ ಇಡಲಾಗಿದೆ. ಮಿರಾಯ್ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

ಮಿರಾಯ್ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ಅನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್​ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರ್ತಿರುವ ಮರೈ ಸಿನಿಮಾವನ್ನು ಏಪ್ರಿಲ್ 18 2025ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

ಇದನ್ನೂ ಓದಿ : PSI ಹಗರಣದ ಕಿಂಗ್​​ಪಿನ್ ಮನೆಗೆ ಉಮೇಶ್ ಜಾಧವ್ ಭೇಟಿ : ವ್ಯಂಗ್ಯವಾಗಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here