ದಂಬುಲ್ಲಾ : ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ, ಪಾಕ್ ತಂಡವನ್ನು 7 ವಿಕೆಟ್ಗಳಿಂದ ಮಣಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ.
ಮಹಿಳಾ ಏಷ್ಯಾಕಪ್ 2024ರ ಟೂರ್ನಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕ್, ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿ 108 ರನ್ ಗಳಿಗೆ ಆಲೌಟ್ ಆಯಿತು. ಭಾರತದ ಪರ ದೀಪ್ತಿ ಶರ್ಮಾ 3, ರೇಣುಕಾ ಸಿಂಗ್, ಪೂಜಾ ವಸ್ತ್ರಕಾರ್ ಮತ್ತು ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ 2 ವಿಕೆಟ್ ಉರುಳಿಸಿದರು.
ಇನ್ನು ಪಾಕಿಸ್ತಾನ ನೀಡಿದ 109 ರನ್ ಗುರಿ ಬೆನ್ನಟ್ಟಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ 14.1 ಎಸೆತಗಳಲ್ಲಿ 109 ರನ್ ಬಾರಿಸಿ ಭಾರತ ಗೆಲುವಿನ ನಗೆ ಬೀರಿತು.
ಶಫಾಲಿ ವರ್ಮಾ 40 ರನ್, ಸ್ಮೃತಿ ಮಂದಾನ 45 ರನ್ ಸಿಡಿಸಿ ಔಟಾದರೆ ಹೇಮಲತಾ 14 ರನ್ ಗಳಿಗೆ ಔಟಾದರು. ಇನ್ನು ನಾಯಕಿ ಹರ್ಮನ್ ಪ್ರೀತ್ ಕೌರ್ ಅಜೇಯ 5 ಮತ್ತು ಜೆಮಿಮಾ ರಾಡ್ರಿಗಸ್ ಅಜೇಯ 3 ರನ್ ಬಾರಿಸಿ ಜಯ ತಂದುಕೊಟ್ಟರು.
ಇದನ್ನೂ ಓದಿ : ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ..!