Download Our App

Follow us

Home » ಸಿನಿಮಾ » ಬಿಗ್‌ಬಾಸ್ ಮನೆಯೊಳಗೆ ಹಾರರ್ ಸರ್ಪೈಸ್..

ಬಿಗ್‌ಬಾಸ್ ಮನೆಯೊಳಗೆ ಹಾರರ್ ಸರ್ಪೈಸ್..

ಬಿಗ್‌ಬಾಸ್ ಮನೆಯ ಸದಸ್ಯರಿಗೆ ಬಿಗ್‌ಬಾಸ್ ಒಂದು ಹಾರರ್ ಸರ್ಪೈಸ್ ನೀಡಿದ್ದಾರೆ. ಆ ಸರ್ಪೈಸ್ ಹೇಗಿದೆ ಎಂಬುದು ಇಂದಿನ ಪ್ರೋಮೊದಲ್ಲಿ ರಿವೀಲ್​ ಆಗಿದೆ.

‘ನಿಮಗಾಗಿ ಒಂದು ಸರ್ಪೈಸ್ ಕಾದಿದೆ. ಗಾರ್ಡನ್ ಏರಿಯಾಗೆ ಹೋಗಿ’ ಎಂದು ಬಿಗ್‌ಬಾಸ್ ಮನೆಯ ಸದಸ್ಯರಿಗೆ ಆದೇಶಿಸಿದ್ದಾರೆ. ಅಲ್ಲಿ ಒಂದು ಟೇಬಲ್ ಮೇಲೆ ಬಲೂನ್, ಕೇಕ್ ಜೊತೆಗೆ ಎರಡು ಬಾಕ್ಸ್‌ಗಳನ್ನು ಇರಿಸಲಾಗಿದೆ. ತುಕಾಲಿ ಸಂತೋಷ್ ಅವರು ಒಂದು ಬಾಕ್ಸ್ ಅನ್ನು ಎತ್ತಿದ್ದೇ ಬೆಚ್ಚಿ ಹಿಂದಕ್ಕೆ ಜಿಗಿದಿದ್ದಾರೆ. ಉಳಿದವರು ಭಯದಿಂದ ಕಿರುಚಿದ್ದಾರೆ. ಯಾಕೆಂದರೆ ಆ ಬಾಕ್ಸ್ ಒಳಗಿರುವುದು ಒಂದು ತಲೆ.

ಇದೇನು ಬಿಗ್‌ಬಾಸ್ ಮನೆಯೊಳಗೆ ಕ್ರೈಂ ಸೀನ್ ಎಂದು ಕಣ್ಣುಜ್ಜಿಕೊಂಡು ನೋಡಿದರೆ ತಲೆ ಅಲುಗಾಡುತ್ತಿದೆ. ಕಣ್ಣುಗಳು ತೆರೆಯುತ್ತಿವೆ. ಮುಖದಲ್ಲಿ ನಗುವಿದೆ. ಅದು ಮತ್ಯಾರೂ ಅಲ್ಲ, ಬಿಗ್‌ಬಾಸ್ ಹಳೆಯ ಸ್ಪರ್ಧಿ ಇಶಾನಿ! ಟೇಬಲ್ ಕೆಳಗೆ ಅವಿತಿಟ್ಟುಕೊಂಡು ಬರೀ ತಲೆಯನ್ನಷ್ಟೇ ಟೆಬಲ್ ನಿಂದ ಹೊರಗೆ ಹಾಕಿ ಸಖತ್ ಶಾಕ್ ಕೊಟ್ಟಿದ್ದಾರೆ ತನಿಶಾ.

ಅವರ ಜೊತೆಗೆ ರಕ್ಷಿತ್, ಸ್ನೇಹಿತ್ ಮತ್ತು ನೀತು ಕೂಡ ಬಿಗ್‌ಬಾಸ್ ಮನೆಯೊಳಗೆ ರೀ ಎಂಟ್ರಿ ಕೊಟ್ಟಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆಗೂ ಮಾತಾಡುತ್ತ ಅವರಿಗೆ ಕಿವಿಮಾತು ಹೇಳುತ್ತಿದ್ದಾರೆ. ನೀತು, ಪ್ರತಾಪ್‌ಗೆ ‘ನಿನಗೆ ಸಪೋರ್ಟ್ ಅಂತ ನಿಂತಿದ್ದೇ ಸಂಗೀತಾ. ಅದೇ ಬ್ರೇಕ್ ಆಗಿಬಿಟ್ಟರೆ ಏನುಕಥೆ?’ ಎಂದು ಪ್ರಶ್ನಿಸಿದ್ದಾರೆ. ನಮ್ರತಾ, ‘ನಾನು ಮನೆಯೊಳಗೆ ಕಾರ್ತಿಕ್ ಜೊತೆಗೆ ನಡೆದುಕೊಳ್ಳುತ್ತಿರುವುದನ್ನು ನೋಡಿ ಸ್ನೇಹಿತ್ ಉರ್ಕೊಂಡಿದಾರಾ?’ ಎಂದು ಕೇಳುತ್ತಿದ್ದ ಹಾಗೆಯೇ ಸ್ನೇಹಿತ್, ಕಿಚನ್‌ನಲ್ಲಿ ಪ್ರತ್ಯಕ್ಷರಾಗಿ, ‘ಹಲೋ ನಮ್ರತಾ’ ಎಂದು ನಮ್ರತಾಗೆ ನಮಸ್ತೆ ಹೇಳಿದ್ದಾರೆ.

ಒಟ್ಟಾರೆ ಹಳೆ ಸ್ಪರ್ಧಿಗಳ ಎಂಟ್ರಿ ಮನೆಯೊಳಗೆ ಸಖತ್ ವೈಬ್ರೇಷನ್ ಕ್ರಿಯೇಟ್ ಮಾಡಿದೆ.ಇದರಿಂದ ಯಾರಿಗೆ ಅನುಕೂಲ, ಯಾರಿಗೆ ಅನಾನುಕೂಲ ಎಂಬುದು ಈ ವಾರಾಂತ್ಯದ ಹೊತ್ತಿಗೆ ತಿಳಿಯಲಿದೆ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು ಮತ್ತು ಎಪಿಸೋಡ್‌ಗಳನ್ನು JioCinemaದಲ್ಲಿ ಉಚಿತವಾಗಿ ನೋಡಿ.

ಇದನ್ನೂಓದಿ : ಬೆಂಗಳೂರಿನಲ್ಲಿ ನಿಗೂಢ ಸ್ಫೋಟ, 7ಮಂದಿಗೆ ಗಂಭೀರ ಗಾಯ..

Leave a Comment

DG Ad

RELATED LATEST NEWS

Top Headlines

ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆಯ ಸರ ಕದ್ದು ಖತರ್ನಕ್ ಕಳ್ಳ ಎಸ್ಕೇಪ್ – FIR ದಾಖಲು..!

ಬೆಂಗಳೂರು : ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆಯ ಸರವನ್ನು ಕಿಟಿಕಿಯಿಂದ ಕದ್ದು ಖತರ್ನಕ್ ಕಳ್ಳ ಎಸ್ಕೇಪ್ ಆಗಿರು ಘಟನೆ ನಗರದ ನಂದಿನಿ ಲೇಔಟ್​ನ ಶಂಕರಪುರದ ಗಣೇಶ ದೇವಸ್ಥಾನದಲ್ಲಿ

Live Cricket

Add Your Heading Text Here