ಹಾವೇರಿ : ಆಟವಾಡುತ್ತಿದ್ದ ಬಾಲಕ ಕಾಲುವೆಗೆ ಬಿದ್ದು ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಹಾವೇರಿಯಲ್ಲಿ ನಡೆದಿದೆ. 12 ವರ್ಷದ ನಿವೇದನ್ ಮೃತಪಟ್ಟ ಬಾಲಕ.
ಭಾರೀ ಮಳೆಗೆ ರಸ್ತೆ ಕಾಣದೆ ಬಾಲಕ ಚರಂಡಿಗೆ ಬಿದ್ದು ಕೊಚ್ಚಿ ಹೋಗಿದ್ದ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ, ಎಸ್ಪಿ ಅಂಶುಕುಮಾರ್, ಪೊಲೀಸ್ ಸಿಬ್ಬಂದಿ, ನಗರಸಭೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದಾರೆ. ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬಾಲಕ ಪತ್ತೆಯಾಗಿದ್ದ. ಕೂಡಲೇ ಅಧಿಕಾರಿಗಳು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಬಾಲಕ ಸಾವನ್ನಪ್ಪಿದ್ದಾನೆ.
ಬಾಲಕ ಸಾವನ್ನಪ್ಪಿದ್ದಾನೆ ಎಂದು ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದೃಢಪಡಿಸಿದ್ದು, ಸರ್ಕಾರದ ಜೊತೆ ಚರ್ಚಿಸಿ ಪರಿಹಾರ ಕೊಡಿಸುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಬಿಲ್ಲವ ಸಮಾಜದ 1ಲಕ್ಷ ಹೆಣ್ಣುಮಕ್ಕಳು ವೇಶ್ಯೆಯರು ಎಂದ ಅರಣ್ಯಾಧಿಕಾರಿ.. ಕಠಿಣ ಕ್ರಮಕ್ಕೆ ಹಿಂದೂ ಸಂಘಟನೆಗಳ ಆಗ್ರಹ..!