Download Our App

Follow us

Home » ರಾಜಕೀಯ » ಹಾವೇರಿ ಭೀಕರ ರಸ್ತೆ ಅಪಘಾತ ಪ್ರಕರಣ – ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!

ಹಾವೇರಿ ಭೀಕರ ರಸ್ತೆ ಅಪಘಾತ ಪ್ರಕರಣ – ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ..!

ಹಾವೇರಿ : ಹಾವೇರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿ ಹೊಡೆದ ಕಾರಣ, ಈ ದುರಂತ ಸಂಭವಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್​.ಡಿ.ಕೆ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಾವೇರಿ ಅಪಘಾತಕ್ಕೆ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ಅಪಘಾತ ನೋವು ತಂದಿದೆ. ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ಕೇಳಿ ಆಘಾತವಾಯ್ತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

 ಸರ್ಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲಿ- HDK

ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ. ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು.

ಲಾರಿ ಚಾಲಕನ ದೋಷಪೂರಿತ ಪಾರ್ಕಿಂಗ್ ಅಪಘಾತಕ್ಕೆ ಕಾರಣ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಬಗ್ಗೆ ತೋರುವ ನಿರ್ಲಕ್ಷ್ಯ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಮೃತರ ಕುಂಟುಂಬಕ್ಕೆ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು – ಬಸವರಾಜ ಬೊಮ್ಮಾಯಿ

ಇಂದು ಬೆಳಗಿನ ಜಾವ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ‌. ಹಾವೇರಿ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಹೇಳಿಕೆಗೆ ಸಚಿವ ದಿನೇಶ್​ ಗುಂಡೂರಾವ್ ಆಕ್ಷೇಪ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here