ಹಾವೇರಿ : ಜಿಲ್ಲೆಯ ಶಿಗ್ಗಾವಿ ಪಟ್ಟಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
23 ವರ್ಷದ ನೀಲಪ್ಪ ಮೂಲಿಮನಿ, 18 ವರ್ಷದ ಸುದೀಪ್ ಕೋಟಿ ಮೃತ ದುರ್ದೈವಿಗಳು. ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ 7 ಮಂದಿ ತಂಡ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕು ನಂದಗಡಕ್ಕೆ ಹೊರಟಿತ್ತು.
ಈ ವೇಳೆ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಬೇವಿನಮರಕ್ಕೆ ಡಿಕ್ಕಿಯಾಗಿದೆ. ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಹಾಸನದಲ್ಲಿ ಕಾಡನೆ ಡೆಡ್ಲಿ ಅಟ್ಯಾಕ್ – ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ..!
Post Views: 174