ಬೆಂಗಳೂರು : ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು, ಸದ್ಯ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಎಚ್‌ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿದ್ದರೂ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ : ರೈಲಿನಲ್ಲಿ ಸರಗಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳರು ಅರೆಸ್ಟ್..!
Post Views: 1,541