ಬೆಂಗಳೂರು : ಅಮಿತ್ ಶಾ ಭೇಟಿ ಬೆನ್ನಲ್ಲೇ ಇಂದು ಹೆಚ್ಡಿಕೆ ಜೆಡಿಎಸ್ ನಾಯಕರ ಮಹತ್ವದ ಸಭೆ ಕೆರದಿದ್ದು, ಬೆಳಗ್ಗೆ 10.30ಕ್ಕೆ ಜೆಪಿ ಭವನದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ. ಮಾಜಿ ಶಾಸಕರು, MLCಗಳು, ಮಾಜಿ ಸಚಿವರು, ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದ್ದು, ಲೋಕಸಭಾ ಚುನಾವಣಾ ಸಿದ್ಧತೆ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಚುನಾವಣಾ ತಂತ್ರ ಹಾಗೂ ಪ್ರಚಾರ ರೂಪುರೇಷೆ ಬಗ್ಗೆ ಮಾತುಕತೆ ನಡೆಯಲಿದ್ದು, ಕುಮಾರಸ್ವಾಮಿಯವರು ಕಮಲ-ದಳ ನಾಯಕರು ಒಟ್ಟಾಗಿ ಪ್ರಚಾರ ಮಾಡಲು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಲು ದಳಪತಿ ಕಸರತ್ತು ನಡೆಸಲಿದ್ದಾರೆ.
ಇದನ್ನೂ ಓದಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ FIR ದಾಖಲು..!
Post Views: 124