ಮೈಸೂರು : ನಂಜನಗೂಡಿನಲ್ಲಿ ಹೆಚ್ಡಿಕೆಗೆ ಅಪಮಾನ ಪ್ರಕರಣವನ್ನು ಮೈಸೂರು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿದ ಮೈಸೂರು ಡಿಸಿ ಲಕ್ಷ್ಮಿಕಾಂತ್ ರೆಡ್ಡಿ ಅವರು, ಕೇಂದ್ರ ಸಚಿವರು ನಂಜಗೂಡು ಶ್ರೀ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ನಂಜನಗೂಡಿನ ಸರ್ಕಾರಿ ಅತಿಥಿಗೃಹದಲ್ಲಿ ಲಘು ವಿಶ್ರಾಂತಿ ತೆರಳಿದ್ದಾಗ ಬಾಗಿಲಿಗೆ ಬೀಗ ಹಾಕಿದ್ದು ಗೊತ್ತಾಗಿದೆ. ಈ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದಿದ್ದಾರೆ.
ಇನ್ನು ಸದರಿ ಪ್ರಕರಣದಲ್ಲಿ ವಿಚಾರಣೆ ಮಾಡುತ್ತಿದ್ದೇವೆ. ಕರ್ತವ್ಯ ಲೋಪ ಮಾಡಿದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಪ್ರಕಟಣೆಯಲ್ಲಿ ಮೈಸೂರು ಡಿಸಿ ಲಕ್ಷ್ಮಿಕಾಂತ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಕಳಪೆ ಮಾಂಸ ಪೂರೈಕೆ ಆರೋಪ – 9 ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಆರೋಗ್ಯ ಇಲಾಖೆ ನೋಟಿಸ್..!
Post Views: 321