Download Our App

Follow us

Home » ರಾಜಕೀಯ » ಬೆದರಿಕೆ ಆರೋಪ – FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಹೆಚ್​​ಡಿಕೆ..!

ಬೆದರಿಕೆ ಆರೋಪ – FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಹೆಚ್​​ಡಿಕೆ..!

ಬೆಂಗಳೂರು : ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನಲೆ ಬೆಂಗಳೂರಿನ ಸಂಜಯ್‌ನಗರ ಠಾಣೆಯ ದಾಖಲಾಗಿದ್ದ, ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಇಂದು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

IPS ಅಧಿಕಾರಿ ಚಂದ್ರಶೇಖರ್​ ಅವರಿಗೆ ಸುದ್ದಿಗೋಷ್ಟಿಯಲ್ಲಿ ಬೆದರಿಕೆ ಹಾಕಿರೋ ಆರೋಪ ಸಂಬಂಧ, ಚಂದ್ರಶೇಖರ್​ ಕೊಟ್ಟ ದೂರಿನ ಹಿನ್ನೆಲೆ FIR ದಾಖಲಾಗಿತ್ತು. ಪ್ರಕರಣದಲ್ಲಿ ಹೆಚ್​.ಡಿ ಕುಮಾರಸ್ವಾಮಿ A-1 ಆರೋಪಿ ಹಾಗೂ ನಿಖಿಲ್​ ಕುಮಾರಸ್ವಾಮಿ A-2 ಆರೋಪಿ, ಸುರೇಶ್ ಬಾಬು A-3 ಆರೋಪಿ ಎಂದು ಉಲ್ಲೇಖಿಸಲಾಗಿದೆ.

ಇದೀಗ ಕೇಂದ್ರ ಸಚಿವ ಕುಮಾರಸ್ವಾಮಿ, ಅವರ ಪುತ್ರ ಹಾಗೂ ಹಾಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ನಿಖಿಲ್‌ ಕುಮಾರಸ್ವಾಮಿ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್‌ ಬಾಬು ಅವರು ಎಫ್‌ಐಆರ್‌ ರದ್ದತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇನ್ನಷ್ಟೆ ವಿಚಾರಣೆಗೆ ಅರ್ಜಿ ಬರಬೇಕಿದೆ.

ಇದನ್ನೂ ಓದಿ : ‘ಟೆನಂಟ್’ ಸಿನಿಮಾದ ಟ್ರೇಲರ್ ರಿಲೀಸ್​ – ನ.22ಕ್ಕೆ ಚಿತ್ರ ತೆರೆಗೆ..!

Leave a Comment

DG Ad

RELATED LATEST NEWS

Top Headlines

ರೈತನ ಆತ್ಮಹತ್ಯೆ ಕುರಿತ ಟ್ವೀಟ್ – ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ..!

ಬೆಂಗಳೂರು : ವಕ್ಫ್ ವಿಚಾರ ಹಿನ್ನೆಲೆಯಲ್ಲಿ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಎಂದು ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪ್ರಕಟಿಸಿದ್ದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ

Live Cricket

Add Your Heading Text Here