ಹಾಸನ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತಕ್ಕೆ ಸಂಬಂಧಿಸಿ ಸಕಲೇಶಪುರ ದೊಡ್ಡತಪ್ಪಲು ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ್ದಾರೆ.
ಕಳೆದ 5 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಕ್ಷರಶಃ ಅಸ್ತವ್ಯಸ್ತವಾಗಿದೆ. ಅಲ್ಲದೇ ದಿನದಿಂದ ದಿನಕ್ಕೆ ಅವಘಡಗಳು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಸಕಲೇಶಪುರ ತಾಲ್ಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಗೆ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಆರ್.ಅಶೋಕ್ ಭೇಟಿ ನೀಡಿದರು.
ಅಧಿಕಾರಿಗಳ ಜೊತೆ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ರಾಷ್ಟ್ರೀಯ ಹೆದ್ದಾರಿ 75 ರ ಕಾಂಕ್ರೀಟ್ ರಸ್ತೆ ಹಾಗೂ ತಡೆ ಗೋಡೆ ಕುಸಿತ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಇದನ್ನೂ ಓದಿ : ಹೊಸಬರ ತಂಡ ಸಿದ್ದಪಡಿಸಿರುವ ‘ಲೈಫ್ ಆಫ್ ಮೃದುಲ’ ಸಿನಿಮಾದ ಸಾಂಗ್ ರಿಲೀಸ್..!
Post Views: 62