ಬೆಳಗಾವಿ : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರ ಗ್ರಾಮದಲ್ಲಿ 17 ತಿಂಗಳ ಮಗುವಿನೊಂದಿಗೆ ತಾಯಿ ಬಾವಿಗೆ ಹಾರಿಗೆ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ.ಗಾಯತ್ರಿ ವಾಘ್ಮೋರೆ(26), ಮಗು ಕುಶಾಲ್ ಮೃತರು.
ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗು ಹಾಗೂ ತಾಯಿ ಶವವನ್ನು ಹೊರ ತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಅಬ್ಬಬ್ಬಾ.. ಈ ವಯಸ್ಸಲ್ಲೂ ಇದೆಂಥಾ ಹುಚ್ಚಾಟ – ಚಲಿಸುತ್ತಿರುವ ರೈಲಲ್ಲಿ ತಾತಪ್ಪನ ಸ್ಟಂಟ್ ಕಂಡು ಸುಸ್ತಾದ ನೆಟ್ಟಿಗರು..!
Post Views: 80