Download Our App

Follow us

Home » ರಾಜ್ಯ » ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ.. ಮಗು ಸೇರಿ 7 ಮಂದಿ ಸಾವು..!

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ.. ಮಗು ಸೇರಿ 7 ಮಂದಿ ಸಾವು..!

ಚೆನ್ನೈ : ದಿಂಡಿಗಲ್‌ ಹೆದ್ದಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ.

ನಾಲ್ಕು ಅಂತಸ್ತಿನ ‘ಸಿಟಿ ಆಸ್ಪತ್ರೆ’ಯಲ್ಲಿ ಸಂಭವಿಸಿದ ದುರಂತದಲ್ಲಿ ಗಾಯಗೊಂಡ 30ಕ್ಕೂ ಹೆಚ್ಚು ಜನರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಐದು ಮಂದಿಯ ಆರೋಗ್ಯ ಸ್ಥಿತಿ ಗಂಭಿರವಾಗಿದೆ ಎಂದು ತಿಳಿದುಬಂದಿದೆ.

ನೆಲ ಮಹಡಿಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಬಳಿಕ ಇತರೆಡೆಗೆ ವ್ಯಾಪಿಸಿಕೊಂಡಿದೆ. ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯಲ್ಲಿ ತುಂಬಿಕೊಂಡ ದಟ್ಟವಾದ ಹೊಗೆಯಿಂದಾಗಿ ಉಸಿರುಗಟ್ಟಿ ಕೆಲವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಆಂಬುಲೆನ್ಸ್‌ಗಳ ಸಹಾಯದಿಂದ ರೋಗಿಗಳನ್ನು ಇತರೆಡೆಗೆ ಸಾಗಿಸಲಾಗಿದೆ. 30 ಮಂದಿಯನ್ನು ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಿಂಡಿಗಲ್‌ ಜಿಲ್ಲಾಧಿಕಾರಿ ಪೂಂಗುಡಿ ಅವರು ಸ್ಥಳ ಪರಿಶೀಲಿಸಿ, ಅಗ್ನಿ ದುರಂತಕ್ಕೆ ಕಾರಣ ಪತ್ತೆಗೆ ಸೂಚಿಸಿದ್ದಾರೆ

ಇದನ್ನೂ ಓದಿ : ಕಲಬುರಗಿಯಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಮೃತ್ಯು..!

 

 

Leave a Comment

DG Ad

RELATED LATEST NEWS

Top Headlines

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಸಿನಿಮಾದ 2ನೇ ಹಾಡು ರಿಲೀಸ್ – ಚಿತ್ರತಂಡಕ್ಕೆ ಗೋವಾ ಸಿಎಂ ಸಾಥ್..!

“ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಲನಚಿತ್ರದ ಎರಡನೇ ಮರಾಠಿ ಲಿರಿಕಲ್‌ ವಿಡಿಯೋ ಜನವರಿ 14ರಂದು ಗೋವಾ ಮುಖ್ಯಮಂತ್ರಿಗಳ ನಿವಾಸದಲ್ಲಿ ಬಿಡುಗಡೆಯಾಗಿದೆ. ಗೋವಾದ ಸಿಎಂ ಪ್ರಮೋದ ಸಾವಂತ್

Live Cricket

Add Your Heading Text Here