ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಬೆಳ್ಳಂಬೆಳಗ್ಗೆ ಮಳೆರಾಯ ಬಿಗ್ ಶಾಕ್ ನೀಡಿದ್ದಾನೆ. ಮುಂಜಾನೆ ನಾಲ್ಕು ಗಂಟೆಯಿಂದ ಧಾರಾಕಾರ ಮಳೆ ಶುರುವಾಗಿದ್ದು, ದಿನನಿತ್ಯದ ಚಟುವಟಿಕೆಗಳಿಗೆ ಅಡೆತಡೆಯಾಗಿದೆ.
ಒಂದು ಕಡೆಯಿಂದ ಇನ್ನೊಂದು ಕಡೆ ಹೋಗಲು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಕೆಲಸಕ್ಕೆ ಹೋಗೋರು ಪರದಾಡುವಂತೆ ಆಗಿದೆ. ನಗರದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಬೆಳಗ್ಗೆಯೇ ಟ್ರಾಫಿಕ್ ಬಿಸಿ ತಟ್ಟಿದೆ.
ಅಗ್ನೇಯ ಬಂಗಾಳ ಉಪ ಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ವೈಪರಿತ್ಯ ಆಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಮೇಲಿನ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಇದೆ.
ಇದನ್ನೂ ಓದಿ : ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಹೈಕಮಾಂಡ್ ಬೆಂಗಳೂರಿಗೆ – ಸಿಎಂ ಕುರ್ಚಿ ಫೈಟ್ಗೆ ಬೀಳುತ್ತಾ ಬ್ರೇಕ್?