ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆ ಆಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ, ಮೈಸೂರಲ್ಲೂ ಮಳೆ ಬೀಳಲಿದೆ. ಬೆಂಗಳೂರಿನಲ್ಲಿ ನಾಳೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಹಲವೆಡೆ ಸಾಧಾರಣ ಮಳೆ ಆಗಲಿದೆ. ಮಧ್ಯಾಹ್ನದ ಮೇಲೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಡಿಸೆಂಬರ್ 19ರಿಂದ ಕರಾವಳಿ ಭಾಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇದನ್ನೂ ಓದಿ : ಹುಟ್ಟುಹಬ್ಬ ಆಚರಿಸಿಕೊಂಡು ‘ಬಿಗ್‌ಬಾಸ್’ ಮನೆಯಿಂದ ಎಲಿಮಿನೇಟ್ ಆದ ಶಿಶಿರ್ ಶಾಸ್ತ್ರಿ..!