ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿದ್ದು, ಮುಂಬೈ, ಪುಣೆ, ರತ್ನಗಿರಿ, ರಾಯಘಡ್ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ.
ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಪುಣೆ ಸುತ್ತಮುತ್ತಲಿನ ತಾಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಖಡಕ್‌ವಾಸ್ಲಾ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದೆ.
ನದಿಗಳು ಉಕ್ಕಿ ಹರಿದು ತಗ್ಗು ಪ್ರದೇಶಗಳಿಗೆ ನೀರು ನುಗ್ತಿದ್ದು, ಕಾರ್, ಬೈಕ್ಗಳು ನೀರಿನಲ್ಲಿ ತೇಲಾಡುತ್ತಿವೆ. ಉಕ್ಕಿ ಹರಿಯುತ್ತಿರುವ ನದಿಗಳಿಂದಾಗಿ ಸೇತುವೆಗಳು ಮುಳುಗಿದ್ದು, ಪುಣೆ ನಗರಿ ಅಕ್ಷರಶಃ ನದಿಯಂತಾಗಿದೆ. ಮುಂಬೈನ ತಗ್ಗು ಪ್ರದೇಶಗಳೆಲ್ಲವೂ ಜಲಾವೃತಗೊಂಡಿದ್ದು, ಭೋಗಾವತಿ ನದಿ ಉಕ್ಕಿ ಹರಿದು ಕೊಲ್ಲಾಪುರದಲ್ಲಿ ಪ್ರವಾಹ ಬಂದಿದೆ. ಬೆಳಗಾವಿ, ಬಾಗಲಕೋಟೆ ಸೇರಿ ಮಹಾರಾಷ್ಟ್ರದ ಗಡಿ ರಾಜ್ಯಗಳಿಗೆ ಆತಂಕ ಶುರುವಾಗಿದ್ದು, ನೀರು ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಹರಿದು ಬರ್ತಿದೆ.
ಇದನ್ನೂಓದಿ : ನನ್ನ ವರ್ಚಸ್ಸು ಸಹಿಸಿಕೊಳ್ಳಲು ಬಿಜೆಪಿ ನಾಯಕರಿಗೆ ಆಗ್ತಿಲ್ಲ – ವಿಧಾನಪರಿಷತ್ನಲ್ಲಿ ವಿಪಕ್ಷಗಳಿಗೆ ಸಿಎಂ ಸಿದ್ದು ತಿರುಗೇಟು