Download Our App

Follow us

Home » ರಾಜ್ಯ » ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ – ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ..!

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ – ಇಂದು ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ..!

ಬೆಂಗಳೂರು : ಕರ್ನಾಟಕದಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಭಾಗಗಳಲ್ಲಿ ಹಲವೆಡೆ ವರುಣಾರ್ಭಟಕ್ಕೆ ಗುಡ್ಡು ಕುಸಿತ ಉಂಟಾಗಿದ್ದರೆ, ಕೆಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇನ್ನು ಹಲವರು ತಮ್ಮ ಸೂರನ್ನು ಕಳೆದುಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ಕೆಳಗಿನ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ‌ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಉಡುಪಿ : ಜಿಲ್ಲೆಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜೊತೆಗೆ ನದಿ, ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ.

ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ : ಹವಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿಂದು ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್)ನ್ನು ನೀಡಿದೆ. ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿದ್ದಾರೆ.

ಇದನ್ನೂ ಓದಿ : ಹೆಚ್​​ಡಿಕೆ ಮುಂದೆ ಮಂಡಿಯೂರಿದ ಬಿಜೆಪಿ – ಪಾದಯಾತ್ರೆಯಿಂದ ಪ್ರೀತಂಗೌಡ ಕಿಕ್​ಔಟ್..!

Leave a Comment

DG Ad

RELATED LATEST NEWS

Top Headlines

ಮಾಸ್ ಕಥನದ ಸುಳಿವಿನೊಂದಿಗೆ ಗಮನ ಸೆಳೆದ ‘ಗನ್ಸ್ ಅಂಡ್ ರೋಸಸ್’ ಟೀಸರ್ – ಚಿತ್ರ ಡಿ.27ಕ್ಕೆ ತೆರೆಗೆ..!

ಖ್ಯಾತ ಕಥೆಗಾರ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಈಗ ಸ್ಯಾಂಡಲ್‌ವುಡ್‌ಗೆ ನಾಯಕನಾಗಿ ಎಂಟ್ರಿಕೊಟ್ಟಿದ್ದಾರೆ. ಅದು ‘ಗನ್ಸ್ ಅಂಡ್ ರೋಸಸ್’ ಎಂಬ ಚಿತ್ರದ ಮೂಲಕ. ಸಿನಿಮಾ ಪಾಲಿಗೆ

Live Cricket

Add Your Heading Text Here