ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ರಮ್ಯಾ ಇಂದು ದಿಢೀರನೇ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ವಿಚಾರಣೆಗೆ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೆ ಬಳಸಲಾಗಿದೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಎಂದು ನಟಿ ಚಿತ್ರತಂಡದ ಮೇಲೆ ಕೇಸ್ ಹಾಕಿದ್ದರು.
ನಟಿ ರಮ್ಯಾ 1 ಕೋಟಿ ರೂ. ಪರಿಹಾರ ಕೇಳಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ರಮ್ಯಾ ಹಾಜರಾಗಿದ್ದಾರೆ.
ಕಳೆದ ವರ್ಷ ಬಿಡುಗಡೆ ಆಗಿದ್ದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ನಿರ್ಮಾಪಕರು ಸೇರಿದಂತೆ ಚಿತ್ರತಂಡದ ವಿರುದ್ಧ ರಮ್ಯಾ ಗರಂ ಆಗಿದ್ದರು. ಇದೇ ಸಿನಿಮಾದಲ್ಲಿ ನಟಿಸಿದ್ದ ನಟಿ ರಮ್ಯಾ ಅವರ ದೃಶ್ಯಗಳನ್ನು ಅನುಮತಿ ಇಲ್ಲದೇ ಬಳಸಿದ್ದಾರೆ. ಈ ಬಗ್ಗೆ ಅನುಮತಿ ಪಡೆದಿರಲಿಲ್ಲ, ಒಪ್ಪಂದ, ಅಗ್ರಿಮೆಂಟ್ ಆಗಿರಲಿಲ್ಲ ಎಂದು ಅವರು ಕೋರ್ಟ್‌ಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ : ಕೊನೇ ಹಂತಕ್ಕೆ ಬಂತು ಬಿಗ್ಬಾಸ್ – ಮೊದಲ ಫೈನಲಿಸ್ಟ್ ಇವರೇ..!