ಬೆಂಗಳೂರು : ಮುಡಾ ಹಗರಣದಿಂದಾಗಿ ರಾಜ್ಯ ಸರ್ಕಾರಕ್ಕೆ ಹಾಗೂ ಸಿಎಂ ಸಿದ್ದರಾಮಯ್ಯನವರಿಗೆ ಈಗಾಗಲೇ ದೊಡ್ಡದೊಂದು ಸಂಕಷ್ಟ ಎದುರಾಗಿದೆ. ಮುಡಾ ಸೈಟ್ ಹಂಚಿಕೆ ವಿಚಾರದಲ್ಲಿ ಅಕ್ರಮವಾಗಿ ಸಿಎಂ ಪತ್ನಿಯವರಿಗೆ 14 ಸೈಟ್ಗಳನ್ನು ನೀಡಲಾಗಿರುವ ವಿಚಾರದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಸದ್ಯ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯಗೆ ಕಾನೂನು ಸಂಕಷ್ಟ ಎದುರಾಗಿದ್ದು, ಇದೀಗ ಸಿಎಂ ಸಿದ್ದು ಬೆಂಬಲಕ್ಕೆ ಹೈಕಮಾಂಡ್ ಧಾವಿಸಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖುದ್ದು ಬೆಂಗಳೂರಿಗೆ ಬಂದಿದ್ದಾರೆ.
ರಾಜಕೀಯ, ಕಾನೂನಾತ್ಮಕವಾಗಿ ಖರ್ಗೆ ಭಾರೀ ಬಲ ತುಂಬಲಿದ್ದು, ಕೆಲವೇ ಕ್ಷಣಗಳಲ್ಲಿ ಖರ್ಗೆ – ಸಿದ್ದರಾಮಯ್ಯ ಭೇಟಿಯಾಗುವ ಸಾಧ್ಯತೆಯಿದೆ. ಉಸ್ತುವಾರಿ ಸುರ್ಜೇವಾಲಾ ಇಂದು ಸಂಜೆ ಬೆಂಗಳೂರಿಗೆ ಬರಲಿದ್ದು, ಅತ್ತ ದೆಹಲಿಯಲ್ಲಿ ಹಿರಿಯ ವಕೀಲರು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಗೆ ಅರ್ಜಿ ಸಲ್ಲಿಸುವ ಸಂಬಂಧ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ಚರ್ಚೆ ನಡೆಸುತ್ತಿದ್ದಾರೆ.
ರಾಜ್ಯದ ವಕೀಲರ ತಂಡದೊಂದಿಗೆ ದಿಲ್ಲಿ ಟೀಂ VC ನಡೆಸ್ತಿದ್ದು, ಪ್ರಕರಣದ ಸಂಪೂರ್ಣ ಮಾಹಿತಿ ಪಡೀತಿದೆ. ಈಗಾಗಲೇ ಸುರ್ಜೆವಾಲಾ, ವೇಣುಗೋಪಾಲ್ ಸಿಎಂಗೆ ಫೋನ್ ಮಾಡಿ ಚರ್ಚೆ ಮಾಡಿದ್ದಾರೆ.
ಇದನ್ನೂ ಓದಿ : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ..!