Download Our App

Follow us

Home » ಕ್ರೀಡೆ » ಬೆಂಗಳೂರಲ್ಲಿಂದು ಆರ್‌ಸಿಬಿ-ಕೆಕೆಆರ್‌ ನಡುವೆ ಹೈವೋಲ್ಟೇಜ್‌ ಕದನ – ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ..!

ಬೆಂಗಳೂರಲ್ಲಿಂದು ಆರ್‌ಸಿಬಿ-ಕೆಕೆಆರ್‌ ನಡುವೆ ಹೈವೋಲ್ಟೇಜ್‌ ಕದನ – ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ..!

ಬೆಂಗಳೂರು : ತವರು ಮೈದಾನ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಜ್ಜಾಗಿದೆ. ಇಂದು ಸಂಜೆ 7:30ಕ್ಕೆ ಎರಡೂ ತಂಡಗಳ ಹೈವೋಲ್ಟೇಜ್​ ಪಂದ್ಯ ನಡೆಯಲಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ ಗೆಲುವಿನೊಂದಿಗೆ ಹಳೆ ಟ್ರ್ಯಾಕ್​ಗೆ ಮರಳಿದೆ.

ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಈ ಬಿಗ್​ ಫೈಟ್​​ ಮೇಲೆ ಎಲ್ಲರ ನಿರೀಕ್ಷೆಯಿದೆ. ಪಾಯಿಂಟ್ಸ್​ ಟೇಬಲ್​​ನಲ್ಲಿ ಆರ್​ಸಿಬಿ 6ನೇ ಸ್ಥಾನದಲ್ಲಿದೆ. ಎರಡು ಪಂದ್ಯಗಳನ್ನು ಗೆದ್ದಿರುವ ಸಿಎಸ್​​ಕೆ ಮೊದಲ ಸ್ಥಾನ ಹಾಗೂ ರಾಜಸ್ಥಾನ್ ರಾಯಲ್ಸ್​ ಎರಡನೇ ಸ್ಥಾನದಲ್ಲಿದೆ.

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಇದು 3ನೇ ಪಂದ್ಯವಾಗಿದ್ದು, ತವರಿನಲ್ಲಿ ನಡೆಯುತ್ತಿರುವ 2ನೇ ಪಂದ್ಯವಾಗಿದೆ. ಇನ್ನೂ ಕೆಕೆಆರ್‌ಗೆ ಆವೃತ್ತಿಯ 2ನೇ ಪಂದ್ಯವಾಗಿದೆ. ಆರ್‌ಸಿಬಿ-ಕೆಕೆಆರ್‌ ಈವರೆಗೆ ಒಟ್ಟು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಆರ್‌ಸಿಬಿ 14 ರಲ್ಲಿ ಗೆಲುವು ಸಾಧಿಸಿದ್ದರೆ, ಕೋಲ್ಕತ್ತಾ 18 ಪಂದ್ಯಗಳಲ್ಲಿ ಜಯಗಳಿಸಿದೆ.

ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ

  • ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ
  • ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ
  • ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
  • ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು ಹೀಗಿವೆ

  • ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
  • ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
  • ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್​​
  • ಕಿಂಗ್ಸ್ ರಸ್ತೆ, (ಕಬ್ಬನ್ ಪಾರ್ಕ್ ಒಳಭಾಗ)
  • ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್​​ಗಳು ಪಿಕ್ ಆಪ್ ಮತ್ತು ಡ್ರಾಪ್​ ಮಾಡುವ ಸ್ಥಳ ನಿಗದಿ ಮಾಡಲಾಗಿದೆ.

ಪಿಚ್‌ ರಿಪೋರ್ಟ್‌ ಹೇಗಿದೆ? ಚಿನ್ನಸ್ವಾಮಿ ಸ್ಟೇಡಿಯಂ ಚಿಕ್ಕ ಬೌಂಡರಿಗಳನ್ನು ಹೊಂದಿರುವುದರಿಂದ ಇದು ಬ್ಯಾಟಿಂಗ್‌ ಸ್ನೇಹಿ ಪಿಚ್‌ ಆಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳಲ್ಲೂ ಪವರ್‌ ಹಿಟ್ಟರ್‌ಗಳಿದ್ದಾರೆ. ಹೀಗಾಗಿ ಬ್ಯಾಟರ್‌ಗಳಿಗೆ ಪಿಚ್‌ ಸಹಕಾರಿಯಾಗಕಿದೆ. ಇಂದು ರನ್‌ ಹೊಳೆ ಹರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.   

ಇದನ್ನೂ ಓದಿ : ವೃದ್ಧನೊಂದಿಗೆ ಅಮಾನವೀಯವಾಗಿ ನಡೆದುಕೊಂಡ ಬಿಬಿಎಂಪಿ ಮಾರ್ಷಲ್‍ ಸೇವೆಯಿಂದ ವಜಾ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here