Download Our App

Follow us

Home » ರಾಜ್ಯ » ಹಿರೇಮಗಳೂರು ಕಣ್ಣನ್​​ಗೆ ನೋಟಿಸ್​ ವಿಚಾರ – ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಹಿರೇಮಗಳೂರು ಕಣ್ಣನ್​​ಗೆ ನೋಟಿಸ್​ ವಿಚಾರ – ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಹಿರೇಮಗಳೂರು ಕೋದಂಡ ರಾಮಚಂದ್ರಸ್ವಾಮಿ ದೇವಾಲಯದ ಅರ್ಚಕರು, ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್‌ ಅವರಿಗೆ ವೇತನ ತಡೆಹಿಡಿದು ಜಿಲ್ಲಾಡಳಿತ ನೋಟಿಸ್ ನೀಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

ಹಿರೇಮಗಳೂರು ಕಣ್ಣನ್ ಅವರಿಗೆ ಹಣ ವಾಪಾಸು ನೀಡುವಂತೆ ನೋಟಿಸ್​ ಜಾರಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಸಿಎಂ ಆಫ್ ಕರ್ನಾಟಕ ಎಕ್ಸ್​ ಅಕೌಂಟ್​ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ಬರೆದು ಸಿಎಂ ಪೋಸ್ಟ್​ ಹಂಚಿಕೊಡಿದ್ದಾರೆ.

ಚಿಕ್ಕಮಗಳೂರು ಹೊರ ವಲಯದ ಕಲ್ಯಾಣ ಕೋದಂಡರಾಮ ದೇವಾಲಯದಲ್ಲಿ ಹಿರೇಮಗಳೂರು ಕಣ್ಣನ್ ಅವರು ಕಳೆದ 50 ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು ಸಂಬಳವಾಗಿ 7,500 ರೂಪಾಯಿ ಜಮೆ ಆಗುತ್ತಿತ್ತು. ಈ 7,500 ರೂಪಾಯಿ ನೀಡಿದ ಸಂಬಳದಲ್ಲಿ 4,500 ವಾಪಸ್ ನೀಡಲು ಚಿಕ್ಕಮಗಳೂರು ತಹಶೀಲ್ದಾರ್ ಸುಮಂತ್ ಅವರು ನೋಟಿಸ್ ನೀಡಿದ್ದರು. ಈ ಸಂಬಂಧ ಸದ್ಯ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್​ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ : ಆತ್ಮಸಾಕ್ಷಿಯ ಕನ್ನಡಿಯಲ್ಲಿ ತಮ್ಮನ್ನು ತಾವೇ ಕಂಡುಕೊಂಡ ಬಿಗ್‌ಬಾಸ್‌ ಸ್ಪರ್ಧಿಗಳು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here