Download Our App

Follow us

Home » ರಾಜ್ಯ » ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬ*ಲಿ..!

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬ*ಲಿ..!

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿಯಾಗಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಮೆಟ್ರೋ ಸ್ಟೇಷನ್ ಬಳಿ 62 ವರ್ಷದ ಆಶಾರಾಣಿ ಎಂಬುವವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣಬಿಟ್ಟಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಆಶಾರಾಣಿ ಅವರು ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ‌ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಆರು ಘಂಟೆ ಸಮಯದಲ್ಲಿ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಅಪಘಾತ ಬಳಿಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಪ್ರಾಣ ಹೋಗಿದೆ.

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿದಾರರಿಗೆ ಒಟಿಎಸ್ ಜಾರಿ..!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಬಾಕಿದಾರರಿಗೆ ವಿಧಿಸಿದ್ದ ಅಧಿಕ ದಂಡ-ಬಡ್ಡಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ತೆರಿಗೆದಾರರ ಹಿತದೃಷ್ಟಿಯಿಂದ ಒನ್ ಟೈಮ್ ಸೆಟಲ್ ಮೆಂಟ್ ಜಾರಿ

Live Cricket

Add Your Heading Text Here