ಗುಜರಾತ್ : ಕರ್ನಾಟಕದಲ್ಲಿ ಎರಡು ಹೆಚ್‌ಎಮ್‌ಪಿವಿ ವೈರಸ್ ಪತ್ತೆಯಾದ ಬೆನ್ನಲ್ಲೇ ಗುಜರಾತ್‌ನಲ್ಲಿಯೂ ಮೊದಲ ಸೋಂಕು (HMPV Virus) ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕದಲ್ಲಿ ಎರಡು ಹೆಚ್‌ಎಮ್‌ಪಿವಿ ಪ್ರಕರಣಗಳನ್ನು ದೃಢಪಡಿಸಿದ ಕೆಲವೇ ಗಂಟೆಗಳಲ್ಲಿ ಗುಜರಾತ್‌ನಲ್ಲಿ ಪ್ರಕರಣ ವರದಿಯಾಗಿದೆ.
ಇದು ಗುಜರಾತ್ನ ಮೊದಲ ಪ್ರಕರಣವಾಗಿದ್ದು, 2 ವರ್ಷದ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಸದ್ಯ ಮಗುವನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಾಗಾಗಿ ಗುಜರಾತ್ ಸರ್ಕಾರದಿಂದಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಈಗಾಗಲೇ ಬೆಂಗಳೂರಿನ ಇಬ್ಬರು ವೈರಸ್ ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.
ಬೆಂಗಳೂರಿನ ಪ್ರಕರಣದ ನಂತರ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. ಹೆಚ್‌ಎಮ್‌ಪಿವಿ ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ : ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಚೀನಿ ವೈರಸ್ ಪತ್ತೆ – ತುರ್ತು ಸಭೆ ಕರೆದ ರಾಜ್ಯ ಸರ್ಕಾರ..!