Download Our App

Follow us

Home » Uncategorized » ಯೂಟ್ಯೂಬ್​​​ನಲ್ಲಿ ‘ಹೊಂದಿಸಿ ಬರೆಯಿರಿ’ ಸಿನಿಮಾ ರಿಲೀಸ್​​..!

ಯೂಟ್ಯೂಬ್​​​ನಲ್ಲಿ ‘ಹೊಂದಿಸಿ ಬರೆಯಿರಿ’ ಸಿನಿಮಾ ರಿಲೀಸ್​​..!

ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಹಾಗೂ ಸಂಡೇ ಸಿನಿಮಾಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ “ಹೊಂದಿಸಿ ಬರೆಯಿರಿ” ಯೂಟ್ಯೂಬ್ ‌ನಲ್ಲಿ ಬಿಡುಗಡೆಯಾಗಿದೆ. ಅಮೇಜಾನ್ ಪ್ರೈಮ್​​​ನಲ್ಲಿ ಇನ್ನೂ ಸ್ಟ್ರೀಮ್ ಆಗುತ್ತಿದ್ದರೂ, ಇದು ಭಾರತ, ಯುಎಸ್​​​ಎ ಮತ್ತು ಯುಕೆ ಹೊರತಾಗಿ ಬೇರೆ ದೇಶಗಳಲ್ಲಿ ಸ್ಟ್ರೀಮ್ ಆಗುತ್ತಿಲ್ಲ. ಹಾಗಾಗಿ ಉಳಿದ ಎಲ್ಲ ದೇಶಗಳ ಕನ್ನಡಿಗರಿಗೆ ತಲುಪಬೇಕು. ಥಿಯೇಟರ್​​​ನಲ್ಲಿ ಚಿತ್ರ ನೋಡಿರದ ಹಾಗೂ ಒಟಿಟಿ ಚಂದಾದಾರರ ಆಗದ ಎಲ್ಲರಿಗೂ ಚಿತ್ರ ತಲುಪಲಿ ಎನ್ನುವ ಉದ್ದೇಶ ಚಿತ್ರತಂಡ ಈ ನಿರ್ಧಾರ ಮಾಡಿದೆ.

ಹೊಂದಿಸಿ ಬರೆಯಿರಿ ಸಿನಿಮಾಗೆ ಹಾಕಿದ್ದ ಹಣ ವಾಪಸ್ ಆಗದಿದ್ದರೂ ಚಿತ್ರತಂಡ ಇಂತಹ ಗಟ್ಟಿ ನಿರ್ಧಾರಕ್ಕೆ ಬಂದಿದೆ. ಹಾಗಂತ ಯೂಟ್ಯೂಬ್​​​ನಲ್ಲಿ ರೆಂಟಲ್ ಮೊಡೆಲ್ ಆಯ್ಕೆ ಮಾಡಿ ಒಂದಿಷ್ಟು ಹಣ ನಿಗದಿ ಪಡಿಸಿ ನೋಡಿ ಎಂದು ಕೇಳುವುದಕ್ಕಿಂತ, ಉಚಿತವಾಗಿ ಯೂಟ್ಯೂಬ್​​​ನಲ್ಲಿ ಎಲ್ಲರೂ ಸಿನಿಮಾ ನೋಡಲಿ, ಅವರಿಗೆ ಸಿನಿಮಾ ಇಷ್ಟವಾದರೆ ಮಾತ್ರ ತೋಚಿದಷ್ಟು ಹಣ ಕೊಡಲಿ ಎಂಬ ನಿರ್ಧಾರ ಮಾಡಿದೆ ಚಿತ್ರತಂಡ. ಹೀಗಾಗಿ ನಿರ್ಮಾಣ ಸಂಸ್ಥೆ “Sunday cinemas” ನ QR CODE , UPI ID ಹಾಗೂ ಬ್ಯಾಂಕ್ Details ಅನ್ನು ಲಗತ್ತಿಸಿಲಾಗಿದೆ ಜೊತೆಗೆ You tube Description ನಲ್ಲು ಇದರ ಬಗ್ಗೆ ಮಾಹಿತಿ ಇದೆ.

ನಮ್ಮ “ಹೊಂದಿಸಿ ಬರೆಯಿರಿ” ಚಿತ್ರದ you tube link ನ್ನು ನಿಮ್ಮ social media ದಲ್ಲಿ, whats app Status ನಲ್ಲಿ share ಮಾಡುವ ಮೂಲಕ ಎಲ್ಲರಿಗೂ ತಲುಪಿಸಿ. ನಮ್ಮ ಸಂಸ್ಥೆಯ ಮುಂದಿನ ಸಿನಿಮಾಗಳಿಗೆ ಪ್ರೋತ್ಸಾಹಿಸಿ, ಈಗಾಗಲೇ ಪ್ರೀ ಪ್ರೊಡಕ್ಷನ್ ಹಂತದಲ್ಲಿರುವ ನಮ್ಮ ಮುಂದಿನ ಚಿತ್ರದ ವಿವರಣೆಯನ್ನು ಆದಷ್ಟು ಬೇಗ ಹಂಚಿಕೊಳ್ಳುತ್ತೇವೆ ಎಂದು ರಾಮೇನಹಳ್ಳಿ ಜಗನ್ನಾಥ ತಿಳಿಸಿದ್ದಾರೆ.

ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ಜೊತೆಗೆ ತಮ್ಮ ಸ್ನೇಹಿತರ ಜೊತೆಗೂಡಿ ಸಂಡೇ ಸಿನಿಮಸ್ ಬ್ಯಾನರ್ ನಡಿ ನಿರ್ಮಾಣ ಮಾಡಿರುವ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಪ್ರವೀಣ್ ತೇಜ್, ನವೀನ್ ಶಂಕರ್, ಶ್ರೀ ಮಹದೇವ್, ಅನಿರುದ್ದ್ ಆಚಾರ್ಯ, ಭಾವನಾ ರಾವ್, ಐಶಾನಿ ಶೆಟ್ಟಿ, ಸಂಯುಕ್ತ ಹೊರ್ನಾಡ್, ಅರ್ಚನಾ ಜೋಯಿಸ್ ಹಲವರು ನಟಿಸಿದ್ದಾರೆ.

ಇದನ್ನೂ ಓದಿ : ರಾಜಕಾರಣಕ್ಕಾಗಿ ಇನ್ನೊಬ್ಬರ ಸಾ*ವು ಬಯಸಬಾರದು : ಶಿವರಾಮೇಗೌಡ ಸಂಭಾಷಣೆಗೆ ನಿಖಿಲ್​ ರಿಯಾಕ್ಷನ್..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here