ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ. ಮದ್ದೂರು ಪಟ್ಟಣದ ಶಿಂಷಾ ನದಿ ಬಳಿ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಶಂಕರ್ ಹಾಗೂ ಮಹದೇವು ಎಂಬವರು ಮೃತರಾಗಿದ್ದು, ಮೃತರು ಬೆಂಗಳೂರಿನ ICICI ಬ್ಯಾಂಕ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕಿಶೋರ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು ಮಂಡ್ಯ ಮಿಮ್ಸ್ನಲ್ಲಿ ಟ್ರೀಟ್ಮೆಂಟ್ ಕೊಡಿಸಲಾಗ್ತಿದೆ.
ಕೆಲಸದ ಮೇಲೆ ಮೈಸೂರಿಗೆ ಹೋಗಿದ್ದ ಮೂವರೂ ಬೆಂಗಳೂರಿಗೆ ವಾಪಸ್ ಆಗ್ತಾ ಇದ್ದರು. ಸಿಸಿಟಿವಿ ಕ್ಯಾಮೆರಾ ಕಂಬಕ್ಕೆ ಡಿಕ್ಕಿ ಹೊಡೆದು ಮತ್ತೊಂದು ಪಥಕ್ಕೆ ಹೋಗಿ ಕಾರ್ ಪಲ್ಟಿಯಾಗಿದೆ. ಮದ್ದೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ತುಮಕೂರು : ರೈತನ ಶೆಡ್ಗೆ ಬೆಂಕಿ ಬಿದ್ದು ಜಾನುವಾರುಗಳು ಸಜೀವ ದಹನ..!
Post Views: 607