ರಾಯಚೂರು : ಮಾನ್ವಿ ಪಟ್ಟಣದಲ್ಲಿ ಸ್ಕೂಲ್ ಬಸ್ ಮತ್ತು KSRTC ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಮಾನ್ವಿ ತಾಲೂಕಿನ ಕಪಗಲ್ ಹಳ್ಳದ ಬಳಿ ಈ ಘಟನೆ ನಡೆದಿದೆ.
ಮಾನ್ವಿ ಪಟ್ಟಣದ ಲೋಯೋಲಾ ಶಿಕ್ಷಣ ಸಂಸ್ಥೆಗೆ ಸೇರಿದ ಸ್ಕೂಲ್ ಬಸ್ ಇದಾಗಿದ್ದು, ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವೇಳೆ ಸ್ಕೂಲ್ ಬಸ್ಗೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ KSRTC ಬಸ್ ಡಿಕ್ಕಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ದುರ್ಮರಣ ಹೊಂದಿದ್ದು, ಮೃತರನ್ನು 1ನೇ ತರಗತಿಯ ಸಮಂತಾ, 7ನೇ ತರಗತಿಯ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಇನ್ನು ಸ್ಕೂಲ್ ಬಸ್ನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದಿಂದ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಸ್ಥಿತಿ ಕಂಡು ಪೋಷಕರ ಆಕ್ರಂದನ ಮುಗಿಲು ಮಟ್ಟಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೊನೆಗೂ ರಿಟ್ರೀವ್ ಆಗಲೇ ಇಲ್ಲ ದರ್ಶನ್ ಫೋನ್ – ಹೈದರಾಬಾದ್ CFSLನಿಂದ ಮೊಬೈಲ್ ರಿಟರ್ನ್..!