ಉಡುಪಿ : ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಮೆಣಸು ಸಾಗಾಟದ ಪಿಕಪ್ ಡಿಕ್ಕಿಯಾದ ಪರಿಣಾಮ, ಬಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಡೂರು ಕುಂಞಡಿ ಸಮೀಪದ ಜನ್ನಾಲ್ ಎಂಬಲ್ಲಿ ನಡೆದಿದೆ.
ಖಾಸಗಿ ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಕೊಲ್ಲೂರಿನಿಂದ ಬರುತ್ತಿದ್ದ ಮೆಣಸು ಸಾಗಿಸುತ್ತಿದ್ದ ಪಿಕಪ್ ವಾಹನವೊಂದು ಕುಂದಾಪುರ ಕಡೆಯಿಂದ ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.
ಅಪಘಾತದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕಪ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯ ಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ರಾಘವೇಂದ್ರ (43), ವಾಸಿಂ (30), ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ.
ರಾಘವೇಂದ್ರ ಹಾಗೂ ವಾಸಿಂ ಪಿಕಪ್ ನಲ್ಲಿ ಇದ್ದವರು. ಉಳಿದವರು ಬಸ್ಸಿನಲ್ಲಿದ್ದ ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಲಬುರಗಿ : ಪಾರ್ಟಿ ಮಾಡ್ತಿದ್ದ ವೇಳೆ ಯವಕರ ಮಧ್ಯೆ ಗಲಾಟೆ – ಓರ್ವನ ಮೇಲೆ ಫೈರಿಂಗ್..!