ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ. ಪ್ರಿಯಕರನ ಕೈಯಿಂದಲೇ ಪ್ರೇಯಸಿಯ ಬರ್ಬರ ಹತ್ಯೆಯಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಯ ದುರಂತ ಅಂತ್ಯವಾಗಿದೆ.
ಇಂದಿರಾನಗರದ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಈ ಭಯಾನಕ ಕೃತ್ಯ ನಡೆದಿದ್ದು, ಮೃತ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಮಾಯಾ ಹಾಗೂ ಆಕೆಯ ಪ್ರಿಯಕರ ಸರ್ವೀಸ್ ಅಪಾರ್ಟ್‌ಮೆಂಟ್‌ಗೆ ಬಂದು ರೂಂ ಬುಕ್ ಮಾಡಿದ್ದರು.
ನಿನ್ನೆ ಸಂಜೆ ಮಾಯಾಗೆ ಚಾಕುವಿನಿಂದ ಇರಿದು ಆರೋಪಿ ಅಲ್ಲಿಂದ ಎಸ್ಕೇಪ್ ಆಗಿರುವ ಶಂಕೆ ವ್ಯಕ್ತವಾಗಿದೆ. ಸರ್ವೀಸ್ ಅಪಾರ್ಟ್‌ಮೆಂಟ್‌ನ ರೂಮ್ ಒಳಗ್ಗೆ ಇಬ್ಬರೇ ಹೋಗಿರುವುದರಿಂದ ಪ್ರಿಯಕರನಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಇಂದಿರಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಬಿಹಾರದಿಂದ ಅಕ್ರಮವಾಗಿ ಪಿಸ್ತೂಲ್ ತಂದು ಮಾರಾಟಕ್ಕೆ ಯತ್ನಿಸಿದ ಆರೋಪಿಗಳು ಅರೆಸ್ಟ್..!
Post Views: 389