ಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್‌ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಂಜಯ್ (58), ಅಜ್ಜಾಸ್ವಾಮಿ (18) ಮೃತಪಟ್ಟ ಮಾಲಾಧಾರಿಗಳು.
ಇವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇನ್ನುಳಿದ 7 ಮಂದಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಅಯ್ಯಪ್ಪ ಮಾಲಾಧಾರಿಗಳಿಗೆ ಕಿಮ್ಸ್ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. ಈ ನಡುವೆ, ಹೆಚ್ಚಿನ ಚಿಕಿತ್ಸೆ ಕೂಡಿಸಲು ಸಚಿವ ಸಂತೋಷ್ ಲಾಡ್ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ.
ಹುಬ್ಬಳ್ಳಿ ದುರಂತದ ಹಿನ್ನೆಲೆ : ಡಿಸೆಂಬರ್ 22ರ ರಾತ್ರಿ ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಅಯ್ಯಪ್ಪ ಮಾಲಾಧಾರಿಗಳು ದೇಗುಲದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡಿತ್ತು. ಗ್ಯಾಸ್ ಸೋರಿಕೆಯಾಗಿದ್ದು, ದೀಪದ ಬೆಂಕಿ ತಗುಲಿ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿತ್ತು. ಈ ವೇಳೆ 9 ಮಂದಿ ಗಂಭೀರ ಗಾಯಗೊಂಡಿದ್ದರು. ಅವರನ್ನೆಲ್ಲ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ : Bossism ಕಾಲ ಮುಗೀತು.. MAXIMUM MAS ಕಾಲ ಶುರುವಾಯ್ತು – ದರ್ಶನ್ಗೆ ಗುಮ್ಮಿದ ಕಿಚ್ಚ ಸುದೀಪ್..!