Download Our App

Follow us

Home » ಜಿಲ್ಲೆ » ಕೋಲಾರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ- ಒರ್ವ ವಶಕ್ಕೆ, ಮತ್ತೊಬ್ಬ ಪರಾರಿ..!

ಕೋಲಾರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆ- ಒರ್ವ ವಶಕ್ಕೆ, ಮತ್ತೊಬ್ಬ ಪರಾರಿ..!

ಕೋಲಾರ : 2024ರ ಲೋಕಸಭಾ ಚುನಾವಣೆ ಹಿನ್ನೆಲೆ ಇಡೀ ದೇಶಾದ್ಯಂತ ನೀತೆ ಸಂಹಿತೆ ಜಾರಿಯಾಗಿದ್ದು, ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿರುವ ಪೊಲೀಸರು ಮತ್ತು ಚುನಾವಣಾಧಿಕಾರಿಗಳು, ಚುನಾವಣಾ ಅಕ್ರಮಗಳನ್ನು ತಡೆಯಲು ಹದ್ದಿನ ಕಣ್ಣಿಟ್ಟಿದ್ದಾರೆ. ಇದರೊಂದಿಗೆ ರಾಜಧಾನಿ ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡ ನಂತರವು ಪೊಲೀಸರು ರಾಜ್ಯದೆಲ್ಲೆಡೆ ಹೈ ಆಲರ್ಟ್​ ಆಗಿದ್ದಾರೆ. ಇದೀಗ ಈ ಘಟನೆ ಮಾಸುವ ಮುನ್ನವೇ ಕೋಲಾರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ.

ಮುಳಬಾಗಿಲು ತಾಲ್ಲೂಕು ನಂಗಲಿ ಚೆಕ್ ಪೋಸ್ಟ್​ನಲ್ಲಿ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸ್ವಿಪ್ಟ್ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಅಧಿಕಾರಿಗಳು ಕಾರಿನಲ್ಲಿದ್ದ 1200 ಜಿಲಿಟನ್ ಕಡ್ಡಿಗಳು, 7 ಬಾಕ್ಸ್ ವಯರ್ ಹಾಗೂ  6 ಡೆಟೋನೇಟರ್ಸ್ ಸೇರಿ ಸ್ಫೋಟಕ ಸಾಗಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ.

ಇನ್ನು ನಂಗಲಿ ಪೊಲೀಸರು ಸ್ಫೋಟಕ ವಶಕ್ಕೆ ಪಡೆದು ಕೇಸ್ ದಾಖಲಿಸಿಕೊಂಡಿದ್ದಾರೆ. ಸ್ಫೋಟಕವನ್ನು ಯಾವ ಉದ್ದೇಶಕ್ಕೆ ಸಾಗಣೆ ಮಾಡಲಾಗುತ್ತಿತ್ತು. ಅಕ್ರಮ ಕಲ್ಲು ಗಣಿಗಾರಿಕೆಗೆ ಸಾಗಿಸಲಾಗುತ್ತಿತ್ತಾ? ಅಥವಾ ಬೇರೆ ಇನ್ನಾವುದೇ ಉದ್ದೇಶ ಇತ್ತಾ ಅನ್ನೋ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

ಇದನ್ನೂ ಓದಿ : ಅಕ್ಟೋಬರ್​​ನಲ್ಲಿ ಬಿಡುಗಡೆಯಾಗಲಿದೆ ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here