ಬೆಂಗಳೂರು : ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸಿಲಿಂಡರ್ ಲಿಕೇಜ್ ಆಗಿ ಭಾರೀ ಸ್ಪೋಟ ಸಂಭವಿಸಿದೆ. ಇಬ್ಬರು ಯುವಕರು ವಾಸವಿದ್ದ ಮನೆ ಬ್ಲಾಸ್ಟ್ ಆಗಿದೆ.
ದುರ್ಘಟನೆಯಿಂದ ಕಟ್ಟಡದ ಒಂದು ಮಹಡಿ ಸಂಪೂರ್ಣ ಛಿದ್ರ ಛಿದ್ರವಾಗಿ ಹೋಗಿದ್ದು, ಮನೆಯಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಅವರನ್ನು ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ ಸುಮಾರಿಗೆ ಘಟನೆ ನಡೆದಿದ್ದು, ಭಾರೀ ಸ್ಫೋಟದ ಶಬ್ದಕ್ಕೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಧ್ವಂಸಗೊಂಡಿದೆ. ಬೆಳಗ್ಗೆ ಎದ್ದು ಲೈಟ್ ಹಾಕಿದಾಗ ಸ್ಪೋಟ ಆಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : “ಕುಚುಕು” ಟೀಸರ್, ಸಾಂಗ್ ರಿಲೀಸ್ – ಸ್ನೇಹದ ಮಹತ್ವ ಸಾರುವ ಚಿತ್ರ ಫೆ.14ರಂದು ತೆರೆಗೆ..!
Post Views: 701