Download Our App

Follow us

Home » ರಾಷ್ಟ್ರೀಯ » ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ.. ಐಸಿಯುನಲ್ಲಿದ್ದ ಓರ್ವ ರೋಗಿ ಸಾವು..!

ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ.. ಐಸಿಯುನಲ್ಲಿದ್ದ ಓರ್ವ ರೋಗಿ ಸಾವು..!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದಲ್ಲಿರುವ ಇಎಸ್‌ಐ ಸರ್ಕಾರಿ ಆಸ್ಪತ್ರೆಯ ಒಂದು ಕೋಣೆಯಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ವಿಷಯ ತಿಳಿದು ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಬೇರೆ ಕೋಣೆಗಳಿಗೆ ಹರಡುವ ಮುನ್ನ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ.

ಕೇವಲ 20 ನಿಮಿಷದಲ್ಲಿ 80 ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪಶ್ಚಿಮ ಬಂಗಾಳದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ರೋಹಿತ್​ ಪಡೆಗೆ ಕನ್ನಡಿಗನೇ ವಿಲನ್ – ಬೆಂಗಳೂರಲ್ಲಿ ಭರ್ಜರಿ ಶತಕ ಸಿಡಿಸಿದ ರಚಿನ್ ರವೀಂದ್ರ..!

Leave a Comment

DG Ad

RELATED LATEST NEWS

Top Headlines

3-4 ಸಾವಿರ ಸೈಟ್​ಗಳ ಅಕ್ರಮ ಆಗಿದೆ, ED ಯಾವ ದಾಖಲೆ ಸಂಗ್ರಹ ಮಾಡುತ್ತೆ ನೋಡೋಣ – ಆರ್​​.ಅಶೋಕ್..!

ಮೈಸೂರು: ರಾಜ್ಯವ್ಯಾಪಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ಮೈಸೂರಿನಲ್ಲಿರುವ ಮುಡಾ ಕಛೇರಿ ಮೇಲೆ ಏಕಾಏಕಿ ದಾಳಿ

Live Cricket

Add Your Heading Text Here