Download Our App

Follow us

Home » ರಾಜಕೀಯ » ಸಿದ್ದರಾಮಯ್ಯನವರ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ – ಸಿದ್ದುಗೆ ಹೆಚ್​ಡಿಕೆ ಗುದ್ದು..!

ಸಿದ್ದರಾಮಯ್ಯನವರ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ – ಸಿದ್ದುಗೆ ಹೆಚ್​ಡಿಕೆ ಗುದ್ದು..!

ಬೆಂಗಳೂರು :  40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯಲು ಪ್ರಯತ್ನಿಸಿದ್ರಾ ಎಂದು ಜಿದ್ದಿಗೆ ಬಿದ್ದ ಸಿದ್ದುಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ಗುದ್ದು ಕೊಟ್ಟಿದ್ದಾರೆ.

ಸಿದ್ದಕರ್ಮಿ ಸಿದ್ದರಾಮಯ್ಯನವರೇ ಎಂದು ಟ್ವೀಟ್ ಮಾಡುವ ಮೂಲಕ ಏಟು ಕೊಟ್ಟ ಹೆಚ್​ಡಿಕೆ ಅವರು, ಅಧಿಕಾರದಲ್ಲಿದ್ದು ಲೂಟಿ ಹೊಡೆಯೋ ನಿಮ್ಮ ಹಪಾಹಪಿ ಅರ್ಥ ಆಗುತ್ತೆ. ಕಳ್ಳನ ಜಾಗದಲ್ಲಿ ನಿಂತು ಊರಿಗೆಲ್ಲ ಗೀತೆ ಬೋಧಿಸುತ್ತೀರಿ. ಇಂಥ ಗಲೀಜು ಕೆಲಸ ನಿಮಗೆ ಬೆಣ್ಣೆಯಿಂದ ಬಂದ ವಿದ್ಯೆ ಎಂದು ಗುಡುಗಿದ್ದಾರೆ.

ಸಾಯಿ ವೆಂಕಟೇಶ್ವರಕ್ಕೆ 550 ಎಕರೆ ಮಂಜೂರು ಮಾಡಿದ್ದೇನೆ ಎಂದು ಬೊಗಳೆ ಬಿಟ್ಟಿದ್ದೀರಿ. ನನ್ನ ಬರವಣಿಗೆ ಫೋರ್ಜರಿ ಆಗಿದೆ. ಪತ್ರಿಕೆಗಳ ವರದಿಗೆ ನಾನು ಉತ್ತರ ಕೊಡುತ್ತೇನೆ. ಪಲಾಯನವಾದ ನನ್ನ ಜಾಯಮಾನವಲ್ಲ. ಆದರೆ, ಆ ವರದಿಯನ್ನೇ ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ? 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ನನ್ನ ಸಹಿ ಇಲ್ಲ, ಟಿಪ್ಪಣಿಯೂ ಇಲ್ಲ ಅಂತೀರಿ. ಅಪ್ಪಣೆಯನ್ನಷ್ಟೇ ಕೊಟ್ಟಿದ್ದೀರಿ. 14 ಸೈಟಿಗೆ ₹62 ಕೋಟಿ ಪರಿಹಾರ ಕೇಳಲು ಹೇಳಿದ್ದು ಯಾವ ಟಿಪ್ಪಣಿ? ನಿಮ್ಮದು ನಾಲಿಗೆಯೋ.. ಇನ್ನೇನೋ.. ಆಚಾರವಿಲ್ಲದ ನಾಲಿಗೆ ನನ್ನ ತಟ್ಟೆಯತ್ತ ಚಾಚಿದೆ. ಸತ್ತ ಜೀವದ ರುಚಿ ನೆಕ್ಕಲು.. ಮಿಸ್ಟರ್ ಸಿದ್ದರಾಮಯ್ಯ.. ನಾನು ಕಾನೂನು ಪಂಡಿತ, ವಕೀಲ ಎನ್ನುತ್ತೀರಿ. 2011ರಲ್ಲಿ ಸುಪ್ರೀಂ ಕೋರ್ಟ್ SITಗೆ ಕೊಟ್ಟ ಆದೇಶವೇನು ಎಂದು ನಿಮಗೆ ಗೊತ್ತಿಲ್ಲವೇ ಎಂದು ಕಿಡಿಕಾರಿದ್ದಾರೆ.

ಇನ್ನು ಸೋತರೆ ಬಾಹುಬಲಿಯಂತೆ ಸೋಲಬೇಕು , ಸರ್ಕಾರ ಹೋಗುವಾಗ್ಲೂ ನಿರ್ಭಾವುಕನಾಗಿದ್ದೆ. ಪ್ರಧಾನಮಂತ್ರಿಗಳ ರಕ್ಷಣೆ ಪಡೆದುಕೊಳ್ಳುವ ಕೆಲಸ ನಾನು ಮಾಡಲ್ಲ. ನಿಮ್ಮ ಹೆಣೆಬರಹ ನಿರ್ಧರಿಸುವ ನೂರಾರು ಪುರಾಣಗಳು ನನ್ನಲ್ಲಿವೆ. ಸಾವಿರಾರು ಚಾಪ್ಟರುಗಳ ಪ್ಯಾನ್ ಇಂಡಿಯಾ ಸಿನಿಮಾವನ್ನೇ ಮಾಡಬಹುದು. ಬೇಲಿಕೇರಿಯಲ್ಲಿ ಅದಿರು ಕದ್ದ ಆಸಾಮಿಗಳ ಜತೆ ನಿಮ್ಮ ‘ಸಿದ್ಧಹಸ್ತ’ ಇಲ್ಲವೇ..? ಗಣಿಪುರಾಣ ಬಿಚ್ಚಿದರೆ ನಿಮ್ಮ ಮನೆ ಮುಂದೆ ಕಾನ್ಸ್​ಟೇಬಲ್​ಗಳ ಸಾಲು ನಿಲ್ಲುತ್ತೆ ಹುಷಾರ್​​ ಎಂದು Xನಲ್ಲಿ ಟ್ವೀಟ್ ಮಾಡಿ ​ ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ಗುಡುಗಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೊಲೆ ಕೇಸ್​​ – ದರ್ಶನ್​​ ಭೇಟಿ ಮಾಡಿದ ಚಿಕ್ಕಣ್ಣಗೆ ಮತ್ತೆ ವಿಚಾರಣೆ ಸಂಕಷ್ಟ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here