Download Our App

Follow us

Home » ರಾಜಕೀಯ » ದೇವೇಗೌಡರ ಶಾಪವನ್ನು ನಾನು ಆಶೀರ್ವಾದವೆಂದು ಸ್ವೀಕರಿಸಿದ್ದೇನೆ – ಸಿದ್ದರಾಮಯ್ಯ ತಿರುಗೇಟು..!

ದೇವೇಗೌಡರ ಶಾಪವನ್ನು ನಾನು ಆಶೀರ್ವಾದವೆಂದು ಸ್ವೀಕರಿಸಿದ್ದೇನೆ – ಸಿದ್ದರಾಮಯ್ಯ ತಿರುಗೇಟು..!

ಬೆಂಗಳೂರು : ನನ್ನ ಮತ್ತು ಡಿ.ಕೆ ಶಿವಕುಮಾರ್ ಕಾಲಕ್ಕೆ ಕಾಂಗ್ರೆಸ್ ಪಕ್ಷ ಸರ್ವ ನಾಶವಾಗಲಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ.

ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಅಂತ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಸಿಎಂ, ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ, ಹಿರಿಯರು ಕಿರಿಯರಿಗೆ ಆಶೀರ್ವಾದ ಮಾಡಬೇಕು, ಶಾಪ ಕೊಡಬಾರದು.

ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟವನ್ನು ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ನೊಂದು ಹತಾಶೆಯಿಂದ ಇಂತಹ ಹೇಳಿಕೆ ನೀಡಿರಬಹುದೆಂದು ಭಾವಿಸಿದ್ದೇನೆ.

ತಾವು ಹೇಳಿದ್ದು ತಪ್ಪು ಎಂದು ಅವರಿಗೆ ಪ್ರಾಮಾಣಿಕವಾಗಿ ಅನಿಸಿದರೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆಯಬಹುದು ಎಂದಿದ್ದಾರೆ.ಯಾವ ರಾಜಕೀಯ ಪಕ್ಷ ಕೂಡ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು.

ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ.

ಇದು ಸಂಘ ದೋಷದ ಫಲ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡ ನಾನು ಬಯಸುತ್ತೇನೆ.

ಹಾಗು ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಪಕ್ಷ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕು. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ತಿಳಿಸಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು ‘ಬಿಜೆಪಿಯ ಬಿ ಟೀಮ್’ ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ಧಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ.

ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿ ತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ.

ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆ ನಡುವೆ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದಿದ್ದಾರೆ.

ಇದನ್ನೂ ಓದಿ : ಮಾರ್ಟಿನ್ ಸಿನಿಮಾದ ಆಡಿಯೋ ರೈಟ್ಸ್ 9ಕೋಟಿಗೆ ಸೇಲ್..

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here