ಬೆಂಗಳೂರು : ಕುಮಾರಸ್ವಾಮಿಯನ್ನು ಅಗತ್ಯಬಿದ್ದರೆ ಮುಲಾಜಿಲ್ಲದೇ ಅರೆಸ್ಟ್ ಮಾಡ್ತೀವಿ. ಯಾವ ಕಾರಣಕ್ಕೂ ಹಿಂದೆ-ಮುಂದೆ ನೋಡೋದಿಲ್ಲ ಎಂದು ಚೀಫ್ ಮಿನಿಸ್ಟರ್ ಸಿದ್ದರಾಮಯ್ಯ ನೇರವಾಗಿ ವಾರ್ನಿಂಗ್ ಕೊಟ್ಟಿದ್ದಾರೆ.
ನನ್ನನ್ನು ಜೈಲಿಗೆ ಕಳಿಸೋ ಷಡ್ಯಂತ್ರ ನಡೀತಿದೆ ಎಂದಿದ್ದ ಹೆಚ್ಡಿಕೆ ಟ್ವೀಟ್ ಮಾಡುವ ಮೂಲಕ ತಿರುಗೇಟು ಕೊಟ್ಟ ಸಿದ್ದರಾಮಯ್ಯ ಅವರು, ಹೆಚ್ಡಿಕೆಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದು ರಾಜ್ಯಪಾಲರ ತಾರತಮ್ಯದ ನಡೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇನ್ನು ಕುಮಾರಸ್ವಾಮಿಯವರು ಈಗಾಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದು ಟ್ವೀಟ್ನಲ್ಲಿ ಸಿಎಂ ಸಿದ್ದರಾಮಯ್ಯ ವಾರ್ನಿಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ಗವರ್ನರ್ ವಿರುದ್ಧ ಪ್ರತಿಭಟನೆ – ಭದ್ರತೆಗಾಗಿ ಬುಲೆಟ್ ಫ್ರೂಫ್ ಕಾರು ತರಿಸಿಕೊಂಡ ರಾಜ್ಯಪಾಲರು..!