ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ FIR ದಾಖಲಾಗಿದೆ.
ಲೋಕಾಯುಕ್ತ ಪೊಲೀಸರು FIR ದಾಖಲು ಮಾಡಿದ್ದು, ಇತ್ತೀಚಿಗೆ CBI ತನಿಖೆ ವಾಪಸ್ ಪಡೆಯುವ ಬಗ್ಗೆ ಸರ್ಕಾರ ನಿರ್ಧಾರ ಮಾಡಿತ್ತು. ಆನಂತರ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಲಾಗಿತ್ತು.
CBI ಬದಲು ಲೋಕಾಯುಕ್ತಗೆ ತನಿಖೆ ವರ್ಗಾವಣೆಯನ್ನು ಸರ್ಕಾರ ಮಾಡಿದ್ದು, ಇದೀಗ ಡಿಸಿಎಂ ಡಿಕೆಶಿ ಮೇಲೆ ಲೋಕಾಯುಕ್ತ ಪೊಲೀಸರು FIR ದಾಖಲಿಸಿದ್ದಾರೆ.
ಒಂದು ಕಡೆ ಸಿಬಿಐನಿಂದ ಡಿ.ಕೆ ಶಿವಕುಮಾರ್ಗೆ ನೋಟಿಸ್ ನೀಡಿದ್ದು, ಮತ್ತೊಂದು ಕಡೆ ಲೋಕಾಯುಕ್ತ FIR ದಾಖಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಫೆಬ್ರವರಿ 8ರಂದು ಲೋಕಾಯುಕ್ತ ಎಫ್ಐಆರ್ ದಾಖಲು ಮಾಡಿದೆ.
ಇದನ್ನೂ ಓದಿ : ವಿಜಯಪುರದಲ್ಲಿ ಯುವತಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಯುವಕ : ದೃಶ್ಯ ಸಿಸಿಟಿವಿಯಲ್ಲಿ ಸೆರೆ..!
Post Views: 390