Download Our App

Follow us

Home » ರಾಜ್ಯ » ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್‌.. ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್‌.. ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಒಟ್ಟು 10 ಅಧಿಕಾರಿಗಳ ಮನೆ ಮೇಲೆ ಲೋಕ ದಾಳಿ ನಡೆಸಿದ್ದು,10 ಅಧಿಕಾರಿಗಳಿಗೆ ಸಂಬಂಧಿಸಿದ 40 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳು ಏಕಕಾಲದಲ್ಲಿ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯದ PWD ಅಧಿಕಾರಿ ಹರ್ಷ ಮನೆ ಮೇಲೆ ಲೋಕಾ ದಾಳಿ – ಮಂಡ್ಯದ ಲೋಕೋಪಯೋಗಿ ಇಲಾಖೆ EE ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್​ಹೌಸ್​​ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸನದ ಆಹಾರ ನೀರಿಕ್ಷಕರ ಮನೆ, ಕಚೇರಿ ಮೇಲೆ ದಾಳಿ – ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ದಾಳಿ‌ – ಚಿಕ್ಕಮಗಳೂರಿನಲ್ಲಿ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದೆ. ನೇತ್ರಾವತಿ ಅವರು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ.

ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ರೇಡ್​​ – ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.​​ ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ – ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಒಟ್ಟು ರಾಜ್ಯದ 10 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತಾ ದಾಳಿ –

  1. ಹರ್ಷ- ಮಂಡ್ಯ PWD ಇಲಾಖೆ​ EE (ಎಕ್ಸಿಕ್ಯೂಟಿವ್​​ ಎಂಜಿನಿಯರ್)
  2. ನೇತ್ರಾವತಿ- ಚಿಕ್ಕಮಗಳೂರು ಜಿಲ್ಲೆ ತರಿಕೆರೆ ವಾಣಿಜ್ಯ ತೆರಿಗೆ ಅಧಿಕಾರಿ
  3. ಜಗನ್ನಾಥ್​​​- ಹಾಸನದ ಆಹಾರ ಇಲಾಖೆ ನಿರೀಕ್ಷಕ
  4. ಹನುಮಂತರಾಯಪ್ಪ- ತುಮಕೂರಿನ ಕೆಆರ್‌ಐಡಿಎಲ್ ಅಧಿಕಾರಿ
  5. ರೇಣುಕಮ್ಮ- ಕೊಪ್ಪಳದ ಅರಣ್ಯ ಇಲಾಖೆ ಅಧಿಕಾರಿ
  6. ಪಿ.ರವಿ- ಚಾಮರಾಜನಗರದ ಗ್ರಾಮೀಣಾಭಿವೃದ್ಧಿ ಅಧಿಕಾರಿ
  7. ಯಜ್ಞೇಂದ್ರ- ಮೈಸೂರು ಮುಡಾ ಅಧಿಕಾರಿ
  8. ಬಿ.ರವಿ- ಬಳ್ಳಾರಿಯ ಅಸಿಸ್ಟೆಂಟ್ ಪ್ರೊಫೆಸರ್
  9. ಭಾಸ್ಕರ್- ವಿಜಯನಗರ ವಿದ್ಯುತ್ ಇಲಾಖೆ ಅಧಿಕಾರಿ
  10. ಶರತ್ ಕುಮಾರ್ ಎಚ್.ಎಂ- ಮಂಗಳೂರಿನ ಮೆಸ್ಕಾಂ ಅಧಿಕಾರಿ

ಇದನ್ನೂ ಓದಿ :  ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹ*ತ್ಯೆ ಕೇಸ್ – 15 ಪಿಎಫ್‌ಐ ಕಾರ್ಯಕರ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್..!

Leave a Comment

DG Ad

RELATED LATEST NEWS

Top Headlines

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ : ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನವದೀಪ್ ಸಿಂಗ್..!

ಪ್ಯಾರಿಸ್ : ಪ್ಯಾರಾಲಿಂಪಿಕ್ಸ್​ನಲ್ಲಿ ಶನಿವಾರ ನಡೆದ ಪುರುಷರ ಜಾವೆಲಿನ್ ಥ್ರೋ ಎಫ್​41 ಸ್ಪರ್ಧೆಯಲ್ಲಿ ಭಾರತದ ಜಾವೆಲಿನ್ ಎಸೆತಗಾರ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್‌ ದೂರಕ್ಕೆ

Live Cricket

Add Your Heading Text Here