ಬೆಂಗಳೂರು : ಮುಖ್ಯಮಂತ್ರಿಗಳೇ ಭಂಡತನ ಬಿಡಿ. ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದಾರೆ.
ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಗ್ಗೆ ಟ್ವೀಟ್ ಮಾಡಿದ ಅವರು, ರಾಜ್ಯಪಾಲರು ಸಂವಿಧಾನದತ್ತವಾಗಿಯೇ ಆದೇಶ ಮಾಡಿದ್ದಾರೆ. ಕಾನೂನು ಕ್ರಮಕ್ಕೆ ಅನುಮತಿ ನೀಡಿದ್ದಾರೆ. ಈಗಾಲಾದ್ರೂ ಸಿಎಂ ಸಿದ್ದರಾಮಯ್ಯ ತಮ್ಮ ಭಂಡತನ ಬಿಡಲಿ ಎಂದು ಆಗ್ರಹಿಸಿದ್ದಾರೆ.
ಇನ್ನು ಸಾಕಷ್ಟು ದಾಖಲೆ, ಪುರಾವೆಗಳ ಸಮೇತ ಹೋರಾಟ ಮಾಡಿದ್ದೆವು. ಸರ್ಕಾರ ನಮ್ಮ ಹೋರಾಟಕ್ಕೆ ಕಿಂಚಿತ್ತು ಬೆಲೆ ಕೊಡಲಿಲ್ಲ. ಈ ಪ್ರಕರಣಗಳ ತನಿಖೆ ಪಾರದರ್ಶಕವಾಗಿ ನಡೆಯಬೇಕು.
ಈಗಾಲದ್ರೂ ಸಿಎಂ ನೈತಿಕ ಹೊಣೆ ಹೊರಲಿ. ಮುಖ್ಯಮಂತ್ರಿ ಸ್ಥಾನದ ಘನತೆಯನ್ನ ಉಳಿಸಿಕೊಳ್ಳಲಿ ಎಂದಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರ ಬೀಳಿಸಿ ಅಧಿಕಾರಕ್ಕೆ ಬರುವ ಉದ್ದೇಶ ನಮಗಿಲ್ಲ – ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ..!
Post Views: 61