ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ದೇವೇಗೌಡರ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಲೋಕಸಭೆ ಎಲೆಕ್ಷನ್ಗೆ ದೇವೇಗೌಡರು ರಣತಂತ್ರ ರೂಪಿಸಲಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಕ್ಷೇತ್ರವಾರು ಮುಖಂಡರ ಕರೆಸಿ ಹೆಚ್ಡಿಡಿ ಮಾತುಕತೆ ನಡೆಸುತ್ತಿದ್ದಾರೆ. ಹಾಗಾಗಿ ಇಂದು ಮಂಡ್ಯ ಭಾಗದ ಮುಖಂಡರ ಜತೆ ಹೆಚ್ಡಿಡಿ ಚರ್ಚೆ ನಡೆಸಲಿದಿದ್ದಾರೆ.
ಕಾಂಗ್ರೆಸ್ ನಾಯಕರ ಸಭೆಯಲ್ಲೇ ಜೆಡಿಎಸ್ ಅಲರ್ಟ್ ಆಗಿದೆ. ಹಾಗಾಗಿ ಹಳೆ ಮೈಸೂರು ಭಾಗದಲ್ಲಿ ಮೈತ್ರಿ ನಂತರ ಪರಿಸ್ಥಿತಿ ಹೇಗಿದೆ..? ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯಗಳೇನು..? ಯಾರನ್ನು ಅಭ್ಯರ್ಥಿ ಮಾಡಿದ್ರೆ ಸೂಕ್ತ ಅನ್ನೋ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಹಾಗೆಯೇ ಮಂಡ್ಯದಲ್ಲಿ ಯಾರು ಅಭ್ಯರ್ಥಿ ಆಗಬೇಕು, ಹೆಚ್ಡಿಕೆ, ನಿಖಿಲ್ ಕುಮಾರಸ್ವಾಮಿ ಇಬ್ಬರಲ್ಲಿ ಯಾರನ್ನು ನಿಲ್ಲಿಸಬೇಕು ಈ ಎಲ್ಲಾ ವಿಚಾರಗಳ ಬಗ್ಗೆ ದೇವೇಗೌಡರು ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ : ಗದಗದಲ್ಲಿ ಡೆತ್ ನೋಟ್ ಬರೆದಿಟ್ಟು ಡಾಕ್ಟರ್ ಆ*ತ್ಮಹ*ತ್ಯೆ..!