Download Our App

Follow us

Home » ರಾಜಕೀಯ » ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ..!

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ..!

ಬೆಂಗಳೂರು : ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆಪ್ಟೆಂಬರ್‌ 6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆಶಿ ಅವರು, ಸೆಪ್ಟೆಂಬರ್​​ 6ರ ಮಧ್ಯಾಹ್ನ 12.05ಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ.  ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಇನ್ನು ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಕೊರೋನಾ ಕಾಲದಲ್ಲಿ ಅಂತಃಕರಣದಿಂದ ಶ್ರಮಿಸಿದ್ದೇನೆ, ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ – ಸಂಸದ ಡಾ.ಕೆ.ಸುಧಾಕರ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here