ಬೆಂಗಳೂರು : ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆಪ್ಟೆಂಬರ್ 6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆಶಿ ಅವರು, ಸೆಪ್ಟೆಂಬರ್ 6ರ ಮಧ್ಯಾಹ್ನ 12.05ಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.
ಇನ್ನು ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಕೊರೋನಾ ಕಾಲದಲ್ಲಿ ಅಂತಃಕರಣದಿಂದ ಶ್ರಮಿಸಿದ್ದೇನೆ, ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ – ಸಂಸದ ಡಾ.ಕೆ.ಸುಧಾಕರ್..!